Tuesday, November 26, 2024
Tuesday, November 26, 2024

ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಾಗಾರ

ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಾಗಾರ

Date:

ಮಂಗಳೂರು, ಜು. 16: ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ‌ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು ಸಂಭವಿಸಿದೆ ಎಂದು ಗೊತ್ತಾದ ಕೂಡಲೇ ಮಕ್ಕಳು ತಮ್ಮ ಪೋಷಕರ ಗಮನಕ್ಕೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬಹುದಾಗಿದೆ ಎಂದು ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಹಾಗೂ ಪ್ರಸಕ್ತ ಖಾಯಂ ಲೋಕ ಅದಾಲತ್ ಅಧ್ಯಕ್ಷ ಅಭಯ್ ಧನಪಾಲ್ ಚೌಗುಲೆ ತಿಳಿಸಿದರು.

ಅವರು ಮುಲ್ಕಿಯ ಕಿಲ್ಪಡಿಯ ಎಂ. ಸಿ. ಟಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದಕ್ಕಾಗಿಯೇ ಭಾರತ ಸರಕಾರವು 2012 ರಲ್ಲಿ ಪೋಕ್ಸೋ ಕಾಯ್ದೆ ಜಾರಿಗೆ ತಂದಿದೆ. ಈ ಮೂಲಕ ಅಪ್ರಾಪ್ತ ವಯಸ್ಕರ ಮೇಲೆ ಆಗುವ ಲೈಂಗಿಕ ದೌರ್ಜನ್ಯಕ್ಕೆ ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ವಿಧಿಸುವ ಅವಕಾಶವಿದೆ. ಮಕ್ಕಳು ಇಂತಹ ಕಾಯ್ದೆ ಬಗ್ಗೆ ಅರಿತು ತಮ್ಮ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಿದರೆ ಇದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಿದೆ ಎಂದರು.

ಇನ್ನು ಬಾಲ್ಯವಿವಾಹ ಅನ್ನೋದು ಬಹುದೊಡ್ಡ ಸಾಮಾಜಿಕ ಪಿಡುಗು ಆಗಿದ್ದು, ಮಕ್ಕಳ ಭವಿಷ್ಯಕ್ಕೆ ಆತಂಕವಾಗಿದೆ. ಎಳೆಯ ಪ್ರಾಯದಲ್ಲಿಯೇ ಮಕ್ಕಳನ್ನು ಮದುವೆಗೆ ಒಪ್ಪಿಸುವುದು ಕೂಡಾ ಶಿಕ್ಷಾರ್ಹ ಅಪರಾಧ. ಇಂತಹ ಘಟನೆ ನಡೆಯುತ್ತಿದೆ ಎಂದು ಗೊತ್ತಾದ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತಂದು ಇಂತಹ ಪಿಡುಗನ್ನು ಸಮಾಜದಿಂದ ನಿರ್ಮೂಲನೆ ಮಾಡಲು ಕೈ ಜೋಡಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ವಕೀಲ ಹಾಗೂ ಖಾಯಂ ಲೋಕ ಅದಾಲತ್ ಸದಸ್ಯರಾದ ಫಝಲ್ ರಹಿಮಾನ್, ಮಂಗಳೂರಿನ ವಕೀಲರದ ಮಹಮ್ಮದ್ ಅಸ್ಗರ್ ಮುಡಿಪು, ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಎಂ. ಬಿ ಖಾನ್, ಉಪಾಧ್ಯಕ್ಷರಾದ ಅಡ್ವೋಕೇಟ್ ಓಮರ್ ಫಾರೂಕ್ ಮುಲ್ಕಿ, ಸಂಚಾಲಕ ಹಾಜಿ ಎಚ್ ಅಬೂಬಕ್ಕರ್, ಕಾರ್ಯದರ್ಶಿ ಅಬುಸಲಿ ಹಾಜಿ, ಶಾಲಾ ಮುಖ್ಯ ಶಿಕ್ಷಕರಾದ ಹರೀಶ್ ಬಂಗೇರ ಉಪಸ್ಥಿತರಿದ್ದರು. ಕೃತಿಕಾ ಸ್ವಾಗತಿಸಿದರು, ಸನಾ ವಂದಿಸಿದರು. ಪ್ರಿಯಾಂಕ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!