ಒಮಾನ್, ಜು.18: ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಿ ನಾಪತ್ತೆಯಾಗಿದ್ದ ಎಂಟು ಭಾರತೀಯರು ಸೇರಿದಂತೆ ಒಂಬತ್ತು ಸಿಬ್ಬಂದಿಯನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಟೆಗ್ ರಕ್ಷಿಸಿದೆ. ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ಎಂವಿ ಪ್ರೆಸ್ಟೀಜ್ ಫಾಲ್ಕನ್ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಸೇರಿದಂತೆ ಒಟ್ಟು 16 ಸದಸ್ಯರಿದ್ದರು. ಉಳಿದಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ರಾಸ್ ಮದ್ರಕಾದಿಂದ ಆಗ್ನೇಯಕ್ಕೆ ಸುಮಾರು 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ತೈಲ ಟ್ಯಾಂಕರ್ ಮುಳುಗಿದ ನಂತರ ಭಾರತೀಯ ನೌಕಾಪಡೆಯ ಯುದ್ಧನೌಕೆ ಮತ್ತು P-8I ಕಡಲ ಗಸ್ತು ವಿಮಾನವನ್ನು ಓಮನ್‌ನಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಗಳಿಗಾಗಿ ನಿಯೋಜಿಸಲಾಗಿದೆ. ಭಾರತೀಯ ರಾಯಭಾರ ಕಚೇರಿಯು ಓಮಾನಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಓಮನ್ ಸಮುದ್ರ ಭದ್ರತಾ ಕೇಂದ್ರದಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸಲಾಗುತ್ತಿದೆ ಮತ್ತು ಭಾರತೀಯ ನೌಕಾಪಡೆಯು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ.