ಅಜ್ಜರಕಾಡು, ಜು.19: ಉಡುಪಿ ನಗರಸಭೆಯ ವತಿಯಿಂದ ಡೆಂಗ್ಯೂ ಮುಂಜಾಗೃತಾ ಕ್ರಮವಾಗಿ ನಗರದ ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡ್ರೈ ಡೇ ಆಚರಿಸಲಾಯಿತು. ತಮ್ಮ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತೆ ವಹಿಸುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಹಾಗೂ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನ ಎಣ್ಣೆ ಹಚ್ಚುವಂತೆ ಸೂಚಿಸಿ ವಿದ್ಯಾರ್ಥಿಗಳಿಗೆ ಬೇವಿನ ಎಣ್ಣೆಯನ್ನು ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
ನಗರಸಭಾ ಪೌರಾಯುಕ್ತ ರಾಯಪ್ಪ, ಪರಿಸರ ಅಭಿಯಂತರಾರದ ಸ್ನೇಹ ಕೆ.ಎಸ್., ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಎಸ್, ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಮಂಜುನಾಥ, ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಜೇಂದ್ರ ಕೆ., ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.