ಉಡುಪಿ, ಜು.20: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಪಿಜಿಡಿಹೆಚ್.ಪಿಇ ವಿಭಾಗ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಪ್ರಸಾದ್ ನೇತ್ರಾಲಯ ಉಡುಪಿ, ರೋಟರಿ ಕ್ಲಬ್ ಮಣಿಪಾಲ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಮ್.ಸಿ ಮಣಿಪಾಲ, ಗ್ರಾಮ ಪಂಚಾಯತ್ ಅಂಬಲಪಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠ ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಹಾಗೂ ಮಾಹಿತಿ ಕಾರ್ಯಗಾರ ನಗರದ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮಣಿಪಾಲ ರೋಟರಿ ಕ್ಲಬ್ ಕಾರ್ಯದರ್ಶಿ ಫರಿದಾ ಉದ್ಘಾಟಿಸಿದರು.
ಬೆಂಗಳೂರು ಪಿಜಿಡಿಹೆಚ್.ಪಿಇ ವಿಭಾಗದ ಪ್ರಾಂಶುಪಾಲ ಡಾ. ಶಶಿಕಾಂತ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಎಮ್.ಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಅಡಿಶನಲ್ ಪ್ರೊಫೇಸರ್ ಡಾ. ರಂಜಿತಾ ಶೆಟ್ಟಿ ಸ್ತನ ಕ್ಯಾನ್ಸರ್ ಹಾಗೂ ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತಿಳಿಸಿದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್, ಡೆಂಗ್ಯೂ ಮಲೇರಿಯಾ ಹಾಗೂ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತಾ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ರೋಟರಿ ಕ್ಲಬ್ ಮಣಿಪಾಲ ಸದಸ್ಯೆ ಶೈಲಾ ರಾವ್, ಪ್ರಸಾದ್ ನೇತ್ರಾಲಯದ ನೇತ್ರ ತಜ್ಞರಾದ ಡಾ.ಅಹನಾ, ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜೇಶ್ಮಾ ಸ್ಟೆಲ್ಲಾ ಪಿಕಾರ್ಡೋ, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ವಸಂತಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ರೋಟರಿ ಕ್ಲಬ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪ್ರಭಾರ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ನಿರೂಪಿಸಿ, ಪಿಜಿಡಿಹೆಚ್.ಪಿಇ ಪ್ರಶಿಕ್ಷಣಾರ್ಥಿ ಅನುಪಮ ಅಂಕೋಲೆಕರ ಸ್ವಾಗತಿಸಿ ವಂದಿಸಿದರು.