ಉಡುಪಿ, ಜು.22: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಲ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್ಸೈಟ್ http://kacdc.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ 0820- 2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಸಾಲ ಸೌಲಭ್ಯ: ಅರ್ಜಿ ಆಹ್ವಾನ
Date: