Friday, October 18, 2024
Friday, October 18, 2024

ಮೊಗವೀರ ಯುವ ಸಂಘಟನೆ: ರಕ್ತದಾನ ಶಿಬಿರ

ಮೊಗವೀರ ಯುವ ಸಂಘಟನೆ: ರಕ್ತದಾನ ಶಿಬಿರ

Date:

ಕೋಟ, ಜು. 23: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ರೋಟರಿ ಕ್ಲಬ್ ಕೋಟೇಶ್ವರ, ರಕ್ತನಿಧಿ ಕೆ.ಎಂ.ಸಿ ಮಣಿಪಾಲ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ನಾಗರಾಜ ಬೀಜಾಡಿ ವಹಿಸಿದ್ದರು. ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್‌ನ ಅಧ್ಯಕ್ಷ ಸತೀಶ್ ಎಂ ನಾಯ್ಕ್, ಮೊಗವೀರ ಸಮುದಾಯದ ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ರಕ್ತನಿಧಿ ಮಣಿಪಾಲದ ಡಾ.ಬಿಸ್ಮಿತಾ, ಸಂಘಟನೆಯ ಗೌರವಾಧ್ಯಕ್ಷ ಸುರೇಶ್ ಮೊಗವೀರ ಶಾನಾಡಿ, ಮಹಿಳಾ ಘಟಕದ ಅಧ್ಯಕ್ಷ ಉಷಾ ಬಂಗೇರ ಮಾರ್ಕೋಡು, ಸಂಘಟನೆಯ ಪ್ರಮುಖರಾದ ಚಂದ್ರ ಬಂಗೇರ, ರೋಟರಿ ಕ್ಲಬ್ ಕೋಟೇಶ್ವರ ಕಾರ್ಯದರ್ಶಿ ಸುಭಾಶ್ ಚಂದ್ರ ಶೆಟ್ಟಿ, ಜಿಲ್ಲಾ ಸಂಘಟನೆ ಪ್ರಧಾನ ಕಾರ್ಯದರ್ಶಿ ರವೀಂದ್ರ ಪುತ್ರನ್ ಉಪಸ್ಥಿತರಿದ್ದರು. ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷ ಸುನೀಲ್ ಜಿ ನಾಯ್ಕ್ ಸ್ವಾಗತಿಸಿ, ಕಾರ್ಯದರ್ಶಿ ರಾಘವೇಂದ್ರ ಹಳೆಅಳಿವೆ ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಒಟ್ಟು೧೫೫ ಯುನಿಟ್ ರಕ್ತ ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...
error: Content is protected !!