ಬೆಂಗಳೂರು, ಜು.23: ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿರುವ ಪರಶುರಾಮ ಮೂರ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಮುನಿಯಾಲು ಉದಯ್ ಶೆಟ್ಟಿ ಅವರ ನೇತೃತ್ವದಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಹಾಗೂ ಐವನ್ ಡಿಸೋಜಾ, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಮಿಥುನ್ ರೈ, ಎಂ ಎ ಗಫೂರ್, ಸುಧೀರ್ ಕುಮಾರ್ ಮುರೋಳ್ಳಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ರಕ್ಷಿತ್ ಶಿವರಾಮ್, ಇನಾಯತ್ ಆಲಿ, ಹರೀಶ್ ಕುಮಾರ್, ಅಶೋಕ್ ಕುಮಾರ್ ಕೊಡವೂರು, ದೇವಿಪ್ರಸಾದ್ ಶೆಟ್ಟಿ ಬೆಳಪು, ಮುರಳಿ ಶೆಟ್ಟಿ, ಸುರೇಂದ್ರ ಶೆಟ್ಟಿ, ಶುಬಧ್ ರಾವ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ರಮೇಶ್ ಕಾಂಚನ್, ದಿನಾಕರ್ ಹೇರೂರು, ಸದಾಶಿವ ಸುಭಿತ್, ದೇವಾಡಿಗ, ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಪ್ರದೀಪ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಕೃಪಾ ಆಳ್ವಾ, ಏ ಸಿ ವಿನಯ್‌ರಾಜ್, ಪ್ರವೀಣ್ ಚಂದ್ರ ಆಳ್ವಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಬಳಿಕ ವಿಧಾನಸೌಧಕ್ಕೆ ತೆರಳಿ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣದ ಪ್ರಕರಣಕ್ಕೆ ವಿಶೇಷ ತನಿಖಾ ದಳ ರಚಿಸಿ ತನಿಖೆ ಮಾಡಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.