Sunday, November 24, 2024
Sunday, November 24, 2024

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಮೌಲ್ಯಮಾಪನ ಶಿಬಿರ ಸಂಪನ್ನ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಮೌಲ್ಯಮಾಪನ ಶಿಬಿರ ಸಂಪನ್ನ

Date:

ಉಡುಪಿ, ಜು.23: ವಿಕಲಚೇತನ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಣೆಗಾಗಿ 7 ತಾಲೂಕುಗಳಲ್ಲಿ ನಡೆದ ಮೌಲ್ಯಮಾಪನ ಶಿಬಿರವು ಯಶಸ್ವಿಯಾಗಿ ಮುಕ್ತಾಯವಾಗಿದೆ. ಶಿಬಿರದಲ್ಲಿ 960 ಫಲಾನುಭವಿಗಳು ಭಾಗವಹಿಸಿದ್ದು, ವಿಕಲಚೇತನ ಮತ್ತು ಹಿರಿಯ ನಾಗರಿಕರಿಗೆ ಶಿಬಿರಗಳಲ್ಲಿ ವಿಕಲಚೇತನರ ಸಮಸ್ಯೆಗಳ ಬಗ್ಗೆ ತಪಾಸಣೆ ಮತ್ತು ಅರಿವು ಮೂಡಿಸಲಾಯಿತು. ಉಡುಪಿ ನಗರಸಭೆ, ಸ್ಥಳೀಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳು ಶಿಬಿರದ ಯೋಜನೆಗೆ ಸಹಕರಿಸಿದವು. ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಐ.ಪಿ. ಗಡಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ನೋಡಲ್ ಅಧಿಕಾರಿ ಜಯಶ್ರೀ ಮತ್ತು ಸಿಬ್ಬಂದಿ ವರ್ಗ, ತಾಲೂಕು ನಗರ ಮತ್ತು ಗ್ರಾಮೀಣ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಅಲಿಂಕೋ ಸಂಸ್ಥೆಯ ಅಧಿಕಾರಿಗಳು ಮಾರ್ಗದರ್ಶನ ನೀಡಿದ್ದರು. ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಜಿಲ್ಲಾಸ್ವತ್ರೆಯ ವೈದ್ಯರು ಶಿಬಿರದಲ್ಲಿ ಭಾಗವಹಿಸಿ, ಸಲಹೆ ಸೂಚನೆ ನೀಡಿದ್ದರು ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!