Friday, October 18, 2024
Friday, October 18, 2024

ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್: ಅರ್ಜಿ ಆಹ್ವಾನ

ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್: ಅರ್ಜಿ ಆಹ್ವಾನ

Date:

ಉಡುಪಿ, ಜು.26: ಬ್ರಹ್ಮಾವರದ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಆಗಸ್ಟ್ 14 ರಿಂದ 2025 ರ ಫೆಬ್ರವರಿ 14 ರ ವರೆಗೆ 6 ತಿಂಗಳುಗಳ ಕಾಲ ತೋಟಗಾರಿಕಾ ಬೆಳೆಗಳಲ್ಲಿ ಸಸ್ಯೋತ್ಪಾದನೆ ಮತ್ತು ನರ್ಸರಿ ನಿರ್ವಹಣೆ ಕುರಿತು ಕೌಶಲ್ಯಾಧಾರಿತ ತರಬೇತಿ ನೀಡಲಾಗುತ್ತಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಬೀಜದಿಂದ ಕಸಿ ವಿಧಾನ, ಕಾಂಡದ ತುಂಡುಗಳಿಂದ, ಗೂಟಿ ವಿಧಾನದಿಂದ ಸಸ್ಯೋತ್ಪಾದನೆ ಮಾಡುವುದು, ಸಸ್ಯಗಾರಗಳ ನಿರ್ವಹಣೆ ಹಾಗೂ ಯಶಸ್ವಿ ಉದ್ಯಮಶೀಲತೆಗೆ ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳೊಂದಿಗೆ ಜೋಡಣೆ ಮಾಡಿಸಿ ಕೊಡುವುದರೊಂದಿಗೆ ತರಬೇತಿ ಪೂರೈಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9480458083, 7760331096 ಅಥವಾ 9741009131 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...

ಮುಂದಿನ ವರ್ಷ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳ ಅಳವಡಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.17: ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳು ಉತ್ಪಾದನೆಗೊಳ್ಳುತ್ತಿವೆ....
error: Content is protected !!