ಉಡುಪಿ, ಆ.5: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.disabilityaffairs.gov.in ಅಥವಾ www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಿ-ಮೆಟ್ರಿಕ್ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 31 ಮತ್ತು ಪೋಸ್ಟ್ ಮೆಟ್ರಿಕ್ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿ ಹಾಗೂ ಟಾಪ್ ಕ್ಲಾಸ್‌ಗಳಿಗೆ ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ
ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ
Date: