ಉಡುಪಿ, ಆ.15: ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ, ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಉಡುಪಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಶೋಸಿಯೇಶನ್ ಪ್ರದಾನ ಕಾರ್ಯದರ್ಶಿ ರಮೇಶ್ ಕೋಟ್ಯಾನ್, ಕಾರ್ಯದರ್ಶಿ ಕೃಷ್ಣ ಪೂಜಾರಿ ಹಾಗೂ ಬೆಳ್ಮಣ್ಣು ವಲಯದ ಮಾಜಿ ಅಧ್ಯಕ್ಷರಾದ ವಲ್ಟಾರ್ ಡಿಸೋಜಾ, ಕಾರ್ಯದರ್ಶಿ ದಿನೇಶ್ ಕುಲಾಲ್ ಉಪಸ್ಥಿತರಿದ್ದರು. ಮಹಾಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಮಾಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು. ಗಣೇಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.
ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ
Date: