Saturday, November 23, 2024
Saturday, November 23, 2024

ಆರೋಗ್ಯ ನಿಗಾ ಸಹಾಯಕರ ತರಬೇತಿಗೆ (ಹೋಮ್ ನರ್ಸಿಂಗ್): ಅರ್ಜಿ ಆಹ್ವಾನ

ಆರೋಗ್ಯ ನಿಗಾ ಸಹಾಯಕರ ತರಬೇತಿಗೆ (ಹೋಮ್ ನರ್ಸಿಂಗ್): ಅರ್ಜಿ ಆಹ್ವಾನ

Date:

ಉಡುಪಿ, ಆ.19: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು ಉಡುಪಿ ಮೊ. 8310311448 ಅಥವಾ 9741762007 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...

ಕಾವ್ಯವನ್ನು ರಂಗರೂಪಕ್ಕೆ ತರುವುದು ಸಾಹಸ: ಪ್ರೊ.ಬಿ.ಎ. ವಿವೇಕ ರೈ

ಮೂಡುಬಿದಿರೆ, ನ.23: ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ....

ನಮ್ಮ ಉಳಿವಿಗಾಗಿ ಪಶ್ಚಿಮ ಘಟ್ಟದ ಸಂರಕ್ಷಣೆ ಅತ್ಯಗತ್ಯ

ಮಂಗಳೂರು, ನ.23: ‘ಸಾರ ಸಂಸ್ಥೆ’ ‘ಪರಿಸರಕ್ಕಾಗಿ ನಾವು’ ವೇದಿಕೆಯ ಸಹಯೋಗದೊಂದಿಗೆ ಡಾ....

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!