ಕೃಷಿ ಇಲಾಖೆ ಅಧಿಕಾರಿಗಳ ಭೇಟಿ
ಉಡುಪಿ, ಆ.19: ಜುಲೈ ಮಾಹೆಯಲ್ಲಿ ಸುರಿದ ಭಾರಿ ಮಳೆಯಿಂದ ಕಾಪು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನೆರೆ ಉಂಟಾಗಿ ಬೆಳೆಹಾನಿಯಾದ ಪ್ರದೇಶಗಳಿಗೆ ಜಂಟಿ ಕೃಷಿ ನಿರ್ದೇಶಕ, ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಹಾಗೂ ಕಾಪು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ಸುಮಾರು 18.00 ಹೆ. ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ಇದುವರೆಗೆ 7.42 ಹೆ.ನಷ್ಟು ಮಾತ್ರ ಬೆಳೆ ಹಾನಿ ಅರ್ಜಿ ಸ್ವೀಕೃತವಾಗಿರುತ್ತದೆ. ಬೆಳೆ ನಷ್ಟಕೊಳಗಾದ ರೈತರು ಮಾಹಿತಿ ನೀಡಿದಲ್ಲಿ ಕಂದಾಯ ಇಲಾಖಾ ಅಧಿಕಾರಿಗಳೊಂದಿಗೆ ಕ್ಷೇತ್ರ ಭೇಟಿ ಮಾಡಿ ಮಾರ್ಗ ಸೂಚಿಯನ್ವಯ ಪರಿಹಾರ ಒದಗಿಸಲಾಗುವುದು ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.