Monday, November 25, 2024
Monday, November 25, 2024

ದೇವರಾಜ ಅರಸು ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ: ಶಾಸಕ ಯಶ್‌ಪಾಲ್ ಸುವರ್ಣ

ದೇವರಾಜ ಅರಸು ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ: ಶಾಸಕ ಯಶ್‌ಪಾಲ್ ಸುವರ್ಣ

Date:

ಉಡುಪಿ, ಆ.20: ರಾಜ್ಯ ಕಂಡ ಅನುಭವಿ ಪ್ರಾಮಾಣಿಕ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು. ಕ್ರಾಂತಿಕಾರಿ ನಾಯಕರಾಗಿ ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾಗಿ ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ಅವರ ವಿಚಾರಧಾರೆಗಳನ್ನು ಯುವಪೀಳಿಗೆ ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ಅವರು ಮಂಗಳವಾರ ನಗರದ ಮಿಷನ್ ಕಂಪೌಂಡ್‌ನ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಷ್ಟ್ರ ಕಂಡ ಮಹಾನ್ ಮುತ್ಸದ್ದಿ ರಾಜಕಾರಣಿಗಳಲ್ಲಿ ಅಗ್ರಗಣ್ಯರಾದ ಇವರು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ದೀರ್ಘಕಾಲ ಆಡಳಿತ ನಡೆಸಿ, ಹಿಂದುಳಿದ ವರ್ಗದವವರನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಉಳುವವನೆ ಒಡೆಯ ಕಾರ್ಯಕ್ರಮದ ಮೂಲಕ ರೈತರ ಬದುಕಿಗೆ ಆಶಾಕಿರಣವಾಗಿ, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಮೂಲಭೂತ ಸೌಕರ್ಯ ಸೇರಿದಂತೆ ಹಾಸ್ಟೆಲ್‌ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಮೈಸೂರು ಪ್ರಾಂತ್ಯದಲ್ಲಿದ್ದ ಕರ್ನಾಟಕವನ್ನು ಪ್ರತ್ಯೇಕವಾಗಿ ಕರ್ನಾಟಕ ರಾಜ್ಯವನ್ನಾಗಿ ನಾಮಕಾರಣ ಮಾಡಿ, ಅರ್ಥಪೂರ್ಣವಾದ ವ್ಯವಸ್ಥೆ ಕಲ್ಪಿಸಿದ್ದಾರೆ. ಹಿಂದುಳಿದ ವರ್ಗಗಳ ಜನರು ಶೈಕ್ಷಣಿಕವಾಗಿ ಮುನ್ನೆಲೆಗೆ ಬರುವ ಮೂಲಕ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಬೇಕು ಎಂಬ ಉದ್ದೇಶದಿಂದ ಹಿಂದುಳಿದ ವರ್ಗಗಳ ಜನರಿಗೆ ಶೇ. 27 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಕೆಲಸ ಮಾಡಿದ್ದಾರೆ ಎಂದರು. ಡಿ.ದೇವರಾಜ ಅರಸುರವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಉಪನ್ಯಾಸ ನೀಡಿ ಮಾತನಾಡುತ್ತಾ, ಕರ್ನಾಟಕ ಕಂಡ ಅಪರೂಪದ ರಾಜಕಾರಣಿ ಡಿ. ದೇವರಾಜ ಅರಸು ಅವರು. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿಗೆ ತರುವ ಮೂಲಕ ಉಳುವವನೇ ಭೂ ಒಡೆಯ ಕಾನೂನು ಜಾರಿಗೆ ತರುವಲ್ಲಿ ಶ್ರಮಿಸಿದ್ದರು ಎಂದರು. ಮಲಹೊರುವ ಪದ್ಧತಿ ನಿಷೇಧಕ್ಕೆ ಒತ್ತು ನೀಡುವುದರ ಜೊತೆಗೆ ಅವರುಗಳಿಗೆ ಪೌರಾಡಳಿತ ಸಂಸ್ಥೆಗಳಲ್ಲಿ ಖಾಯಂ ಹುದ್ದೆಗಳನ್ನು ನೀಡುವ ಕೆಲಸ ಮಾಡಿದ್ದರು. ಕೇಂದ್ರದ 20 ಅಂಶಗಳು ಸೇರಿದಂತೆ ನೂರಾರು ಕಾಯಿದೆಗಳನ್ನು ಅನುಷ್ಠಾನಗೊಳಿಸಿದರು. ಪದವಿ ಹೊಂದಿದ ನಿರುದ್ಯೋಗಿ ಯುವ ಜನರಿಗೆ ಸ್ಟೈಫಂಡ್ ಅನ್ನು ದೇಶದಲ್ಲಿಯೇ ಪ್ರಥಮವಾಗಿ ನೀಡಿದರು. ಇದನ್ನು ಅನೇಕ ರಾಜ್ಯಗಳು ಜಾರಿಗೆ ತಂದಿದ್ದು, ಗಮನಾರ್ಹ. ಈ ರೀತಿಯಲ್ಲಿ ಹಲವಾರು ಕೆಲಸಗಳನ್ನು ಮಾಡಿದ ಅಪರೂಪದ ಜನಸೇವಕರಾಗಿದ್ದ ಅರಸುರವರು ಇಂದಿಗೂ ಸಹ ಜನಮನದಲ್ಲಿದ್ದಾರೆ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಪೌರಾಯುಕ್ತ ರಾಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಉಡುಪಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಡಿ.ದೇವರಾಜ ಅರಸು ಪ್ರಶಸ್ತಿ ವಿಜೇತ ಮಲ್ಪೆ ರಾಘವೇಂದ್ರ, ವಿವಿಧ ಹಿಂದುಳಿದ ವರ್ಗಗಳ ಸಂಘಟನೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಎಲ್ಲಾ ನಿಲಯಗಳ ವಿದ್ಯಾರ್ಥಿಗಳು, ಸೇನಾ ಆಯ್ಕೆ ಪೂರ್ವ ತರಬೇತಿ ಕೇಂದ್ರದ ಮುಖ್ಯಸ್ಥರುಗಳು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಸ್ವಾಗತಿಸಿ, ಇಲಾಖೆಯ ಲೆಕ್ಕ ಅಧೀಕ್ಷಕಿ ಸುಗುಣ ವಂದಿಸಿದರು. ಉಡುಪಿ ತಾಲೂಕು ವಿಸ್ತರಣಾಧಿಕಾರಿ ಶ್ರೀಕಾಂತ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!