ನವದೆಹಲಿ, ಆ.21: ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್ ಮತ್ತು ಉಕ್ರೇನ್‌ಗೆ ಮೂರು ದಿನಗಳ ಭೇಟಿಗಾಗಿ ತೆರಳಿದ್ದಾರೆ. ಮಧ್ಯ ಯುರೋಪ್ನಲ್ಲಿ ಪೋಲೆಂಡ್ ಪ್ರಮುಖ ಆರ್ಥಿಕ ಪಾಲುದಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ಭಾರತ ಮತ್ತು ಪೋಲೆಂಡ್ ಪರಸ್ಪರ ಬದ್ಧತೆ ಎರಡು ರಾಷ್ಟ್ರಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು. ಪ್ರಧಾನಿ ಬುಧವಾರ ಬೆಳಗ್ಗೆ ಪೋಲೆಂಡ್‌ಗೆ ತೆರಳಿದರು. ಎರಡೂ ದೇಶಗಳು ತಮ್ಮ ರಾಜತಾಂತ್ರಿಕ ಸಂಬಂಧಕ್ಕೆ 70 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪೋಲೆಂಡ್‌ಗೆ ಭೇಟಿ ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು. ಪಾಲುದಾರಿಕೆಯನ್ನು ಮತ್ತಷ್ಟು ಮುನ್ನಡೆಸಲು ತನ್ನ ಸ್ನೇಹಿತ ಪ್ರಧಾನಿ ಡೊನಾಲ್ಡ್ ಟಸ್ಕ್ ಮತ್ತು ಅಧ್ಯಕ್ಷ ಆಂಡ್ರೆಜ್ ಡುಡಾ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಹೇಳಿದರು. ಅವರು ಪೋಲೆಂಡ್‌ನಲ್ಲಿರುವ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.
ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಉಕ್ರೇನ್‌ಗೆ ಭೇಟಿ ನೀಡಲಿದ್ದೇನೆ ಮತ್ತು ಇದು ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ನೀಡಿದ ಮೊದಲ ಭೇಟಿಯಾಗಿದೆ ಎಂದು ಪ್ರಧಾನಿ ಹೇಳಿದರು. ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ಮತ್ತು ನಡೆಯುತ್ತಿರುವ ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರದ ಬಗ್ಗೆ ದೃಷ್ಟಿಕೋನಗಳನ್ನು ಹಂಚಿಕೊಳ್ಳಲು ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಈ ಹಿಂದೆ ನಡೆಸಿದ ಸಂಭಾಷಣೆಗಳ ಆಧಾರದಲ್ಲಿ ಮುಂದಿನ ಮಾತುಕತೆಗಾಗಿ ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಮರಳುವಿಕೆಯ ಭರವಸೆಯನ್ನು ಅವರು ವ್ಯಕ್ತಪಡಿಸಿದರು.