Friday, November 22, 2024
Friday, November 22, 2024

ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಪಾಲಕರು ನಿರ್ಲಕ್ಷ್ಯ ತೋರಬಾರದು

ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಪಾಲಕರು ನಿರ್ಲಕ್ಷ್ಯ ತೋರಬಾರದು

Date:

ಬೆಂಗಳೂರು, ಆ.21: ವಿಧಾನಸೌಧದಲ್ಲಿ ಸೈಬರ್ ಅಪರಾಧ ನಿಯಂತ್ರಣ ಮತ್ತು ಸೈಬರ್ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮಾತನಾಡಿದರು.

18 ವರ್ಷದ ಒಳಗಿನ ಮಕ್ಕಳ ರಕ್ಷಣೆ, ತಂತ್ರಜ್ಞಾನ ಮತ್ತು ಜಾಲತಾಣಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಪರಿಣಾಮಗಳು, ಅಹಿತಕರ ಚಟುವಟಿಕೆಗಳಲ್ಲಿ ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಮಕ್ಕಳು ತಮಗೆ ಅರಿಯದೆ ಭಾಗಿಯಾಗುತ್ತಿರುವುದನ್ನು ನಿಯಂತ್ರಿಸುವುದು ಅತ್ಯಗತ್ಯವಾಗಿದೆ. ಎನ್‌ಸಿಆರ್‌ಬಿ ಮತ್ತು ಎಸ್‌ಸಿಆರ್‌ಬಿ ವರದಿಗಳಲ್ಲಿ ಮಕ್ಕಳ ವಿರುದ್ದ ನಡೆಯುತ್ತಿರುವ ಸೈಬರ್ ಅಪರಾಧಗಳ ಪ್ರಮಾಣವನ್ನು ಅವಲೋಕಿಸಿ ನಿಯಂತ್ರಿಸುವ ಕಾರ್ಯಗಳು ನಿರಂತರವಾಗಿ ಹಾಗೂ ಪರಿಣಾಮಕಾರಿಯಾಗಿ ಮುಂದುವರೆಯಬೇಕು ಎಂದು ತಿಳಿಸಿದರು. ಕರ್ನಾಟಕ ಸೈಬರ್ ಭದ್ರತಾ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಿರುವ ನೆರವು ಹಾಗೂ ಮಾನವ ಸಂಪನ್ಮೂಲ ಒದಗಿಸಲು ಸರ್ಕಾರ ಸಿದ್ದವಿದೆ.

ಗೂಗಲ್, ಮೆಟಾ, ಫೇಸ್‍ಬುಕ್, ಮೈಕ್ರೋಸಾಫ್ಟ್, ಯುಟ್ಯೂಬ್ ಮತ್ತಿತರ ಕಂಪನಿಗಳ ಜೊತೆ ಸಮನ್ವಯ ಸಾಧಿಸಿ ಮಕ್ಕಳಿಗೆ ಸಂಬಂಧಿಸಿದ ಸಿಎಸ್‌ಎಎಂ ಸಾಮಾಗ್ರಿಗಳನ್ನು ಗುರುತಿಸಿ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗುವುದು. ಸೈಬರ್ ವಂಚನೆಗೆ ಒಳಗಾದ ಮಕ್ಕಳಿಗೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸಹಯೋಗದಲ್ಲಿ ಪುನರ್ವಸತಿಗೆ ಕ್ರಮ ವಹಿಸಬೇಕು.

ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಪಾಲಕರು ನಿರ್ಲಕ್ಷ್ಯ ತೋರಬಾರದು. ಸೈಬರ್ ಅಪರಾಧ ಪತ್ತೆ ಘಟಕಗಳು ಹಾಗೂ ಬ್ಯಾಂಕಿಂಗ್ ವಲಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಹಣಕಾಸು ವಂಚನೆಗಳನ್ನು ತ್ವರಿತವಾಗಿ ಪತ್ತೆ ಮಾಡಿ ತಪ್ಪಿತಸ್ಥರನ್ನು ಶಿಕ್ಷಿಸುವ ಕಾರ್ಯಗಳಾಬೇಕು. ಶಾಲಾ ಹಂತದಲ್ಲಿ ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಡಿಜಿಟಲ್ ಭದ್ರತೆ ಕುರಿತು ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳು ಸೂಚಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!