Sunday, November 24, 2024
Sunday, November 24, 2024

ಕನ್ನಡ ನಾಮಫಲಕ ಕಡ್ಡಾಯ

ಕನ್ನಡ ನಾಮಫಲಕ ಕಡ್ಡಾಯ

Date:

ಬೆಂಗಳೂರು, ಆ.25: ಸರ್ಕಾರದ ಎಲ್ಲಾ ಇಲಾಖೆ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ- 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022 ರ ಅನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ ಎಂದಿದ್ದಾರೆ. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಭಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!