Saturday, September 21, 2024
Saturday, September 21, 2024

ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ: ಶಾಸಕ ಯಶ್‌ಪಾಲ್ ಎ ಸುವರ್ಣ

ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ: ಶಾಸಕ ಯಶ್‌ಪಾಲ್ ಎ ಸುವರ್ಣ

Date:

ಉಡುಪಿ, ಆ.26: ಭಗವದ್ಗೀತೆಯ ತತ್ವಗಳಲ್ಲಿ ಜೀವನ ಸಾರ ಅಡಗಿದೆ. ಭಗವಧ್ಗೀತೆಯ ಅಧ್ಯಯನದಿಂದ ಬದುಕು ಸಾರ್ಥಕ. ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ವಿಶ್ವಕ್ಕೆ ಪ್ರಸ್ತುತ. ಇದನ್ನು ಆಧುನಿಕ ಜೀವನದಲ್ಲಿ ಸಂದರ್ಭಕ್ಕೆ ಅನುಗುಣವಾಗಿ ಅಳವಡಿಸಿಕೊಂಡಾಗ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದು ಶಾಸಕ ಯಶ್‌ಪಾಲ್ ಎ.ಸುವರ್ಣ ಹೇಳಿದರು. ಅವರು ಸೋಮವಾರ ನಗರದ ಡಯಟ್ ಹತ್ತಿರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಉಡುಪಿಯ ಶ್ರೀಕೃಷ್ಣ ಮಠವು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಧಾರ್ಮಿಕತೆಗೆ ಹೆಸರುವಾಸಿಯಾದ ಜಿಲ್ಲೆಯಲ್ಲಿ ಶ್ರೀಕೃಷ್ಣ ಜಯಂತಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಕೃಷ್ಣನ ನಾಡಿನಲ್ಲಿ ಹುಟ್ಟಿರುವುದು ನಮ್ಮೆಲ್ಲರ ಭಾಗ್ಯ ಎಂದರು. ಶ್ರೀಕೃಷ್ಣ ಜಯಂತಿಯನ್ನು ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ಮುದ್ದುಕೃಷ್ಣ ಸ್ಪರ್ಧೆ, ಹುಲಿವೇಷ, ಜಾನಪದ ಕಲೆ, ಮೊಸರು ಕುಡಿಕೆ ಒಡೆಯುವ ಮೂಲಕ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮಲ್ಪೆಯ ವಡಭಾಂಡೇಶ್ವರ ಕಡಲ ತಡಿಯಲ್ಲಿ ಸಿಕ್ಕ ಕೃಷ್ಣ ಮೂರ್ತಿಯನ್ನು ಕೃಷ್ಣಮಠದಲ್ಲಿ ಕಡೆಗೋಲು ಕೃಷ್ಣನನ್ನಾಗಿ ಸ್ಥಾಪಿಸಿದ ಮಧ್ವಾಚಾರ್ಯರು ದೇಶ-ವಿದೇಶಗಳ, ವಿವಿಧ ರಾಜ್ಯಗಳ ಸಹಸ್ರಾರು ಪ್ರವಾಸಿಗರು, ಭಕ್ತರನ್ನು ಉಡುಪಿಯ ಶ್ರೀಕೃಷ್ಣನತ್ತ ಸೆಳೆಯುವಂತೆ ಮಾಡಿದ್ದಾರೆ ಎಂದರು.

ಬೆಂಗಳೂರಿನ ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯೆ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಿ ಮಾತನಾಡಿ, ಕೃಷ್ಣ ಎಂದರೆ ಆಧ್ಯಾತ್ಮಿಕ ಶಕ್ತಿ. ದೇವರು ಎಂದರೆ ನಂಬಿಕೆ. ದೇವರನ್ನು ನಂಬುವುದರಿಂದ ಮಾನಸಿಕವಾಗಿ ಸುಖವಾಗಿರಲು ಸಾಧ್ಯ. ಶ್ರೀಕೃಷ್ಣನನ್ನು ಒಲಿಸಿಕೊಂಡ ಕನಕದಾಸರ ಭಕ್ತಿಯ ಪ್ರತೀಕವಾಗಿ ಶ್ರೀಕೃಷ್ಣ ದರ್ಶನ ನೀಡಿದ ಸ್ಥಳವು ಕನಕನ ಕಿಂಡಿ ಎಂಬ ಹೆಸರಿನಿಂದ ಪ್ರಸಿದ್ಧಿ ಪಡೆಯುವುದರೊಂದಿಗೆ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನರು ಎಂದು ಮನಗಾಣುವಂತೆ ಮಾಡಿದೆ. ಧರ್ಮದ ರಕ್ಷಣೆಗಾಗಿ ಅಧರ್ಮದ ವಿರುದ್ಧ ಹೋರಾಡಲು ಅವತರಿಸಿದ ಶ್ರೀಕೃಷ್ಣ ಭಗವದ್ಗೀತೆಯಲ್ಲಿ ತಿಳಿಸಿದ ಹಾಗೆ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಜ್ಞಾನ ದೊರೆಯುತ್ತದೆ. ಪ್ರಯತ್ನ ಪಟ್ಟರೆ ಉತ್ತಮ ಫಲ ದೊರೆಯುತ್ತದೆ ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಜಿಲ್ಲೆಯ ಪ್ರತಿಯೊಬ್ಬರೂ ಸಂಭ್ರಮಿಸುವ ಹಬ್ಬ. ಕಳೆದ ಮೂರು ನಾಲ್ಕು ದಿನಗಳಿಂದ ಹಬ್ಬಕ್ಕೆ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ. ಹಬ್ಬದ ಆಚರಣೆಯು ಪ್ರತಿಯೊಬ್ಬರಲ್ಲಿಯೂ ಜೀವನೋತ್ಸಾಹವನ್ನು ಉಂಟುಮಾಡುತ್ತದೆ. ಗೊಲ್ಲ ಸಮುದಾಯ ನಂಬಿಕೊಂಡು ಆರಾಧಿಸುವ ದೇವರು ಶ್ರೀಕೃಷ್ಣ. ತನ್ನನ್ನು ನಂಬಿದ ಭಕ್ತರಿಗೆ ದಯಾಪಾಲಿಸುವವನು ಶ್ರೀಕೃಷ್ಣ. ಜಾತಿ ಶ್ರೇಷ್ಠವಾದ ಅಂದಿನ ಕಾಲದಲ್ಲಿ ದೇವರ ದರ್ಶನಕ್ಕೆ ಬಂದ ಕನಕದಾಸರ ಭಕ್ತಿಗೆ ಮರುಳಾಗಿ ತಿರುಗಿ ನಿಂತು ದರ್ಶನ ನೀಡುವ ಮೂಲಕ ಜಾತಿ, ತರತಮ ಬೇಧವೆನ್ನದೇ ಎಲ್ಲರೂ ಸರಿಸಮಾನರು ಎಂದು ತೋರಿಸಿಕೊಟ್ಟಿದ್ದಾರೆ ಎಂದರು. ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ (ರಿ) ಅಧ್ಯಕ್ಷ ದಯಾನಂದ ಬಿ.ಆರ್ ಮಾತನಾಡಿ, ಅಧರ್ಮವನ್ನು ನಾಶಮಾಡಿ, ಧರ್ಮ ಸಂಸ್ಥಾಪನೆಗೆ ಶ್ರೀಕೃಷ್ಣ ಜನಿಸಿದನು. ಆಧುನಿಕ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ, ಅಗೋಚರ ಶಕ್ತಿ ನಮ್ಮ ಧರ್ಮ ಪರಂಪರೆಯಲ್ಲಿದೆ. ಜೀವನದಲ್ಲಿ ಬರುವ ಕಷ್ಟಗಳನ್ನು ನಿಭಾಯಿಸುವಲ್ಲಿ ಭಗವದ್ಗೀತೆಯ ಪಾತ್ರ ಮಹತ್ವ. ಮಕ್ಕಳಿಗೆ ಕೃಷ್ಣನ ಸಾರ, ತತ್ವಗಳನ್ನು ತಿಳಿಸುವ ಮೂಲಕ ಧರ್ಮ ಪರಂಪರೆಯನ್ನು ಉಳಿಸುವ ಕೆಲಸವಾಗಬೇಕು ಎಂದರು.

ಕಲಾವತಿ ದಯಾನಂದ ಮತ್ತು ಬಳಗದ ವತಿಯಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆಯೋಜಿಸಲಾದ ಮುದ್ದು ಕೃಷ್ಣ ಮುದ್ದು ರಾಧೇ ವೇಷದ ಸ್ಫರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ದರ್ಪಣ ಮಹಿಳಾ ಹುಲಿ ತಂಡದವರು ಹುಲಿ ಕುಣಿತ ಪ್ರದರ್ಶಿಸಿದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಯಾದವ ಗೊಲ್ಲ ಸಮಾಜದ ಸಂಘದ ಪದಾಧಿಕಾರಿಗಳು, ಅಧ್ಯಾಪಕರುಗಳು, ವಿದ್ಯಾರ್ಥಿನಿಯರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕನ್ನಡ ಉಪನ್ಯಾಸಕ ರಾಮಾಂಜಿ ನಿರೂಪಿಸಿದರು. ಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!