ಉಡುಪಿ, ಆ.26: ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕುಂಜಿಬೆಟ್ಟು ಮತ್ತು ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಮಲೇರಿಯಾ, ಡೆಂಗ್ಯೂ, ವೈಯಕ್ತಿಕ ಶುಚಿತ್ವ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು. ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾದ್ಯಾಪಕಿ ಡಾ. ಅಖಿಲಾ ಡಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಶಾಲಾ ಪ್ರಭಾರ ಪ್ರಾಂಶುಪಾಲೆ ಮಂಜುಳಾ ಹಾಗೂ ಹಿರಿಯ ಶಿಕ್ಷಕಿ ಸವಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಆರೋಗ್ಯ ಮಾಹಿತಿ ಕಾರ್ಯಕ್ರಮ
ಆರೋಗ್ಯ ಮಾಹಿತಿ ಕಾರ್ಯಕ್ರಮ
Date: