Saturday, November 23, 2024
Saturday, November 23, 2024

ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ

ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ

Date:

ಉಡುಪಿ, ಆ.30: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಲು ಇಚ್ಛಿಸುವ ಎಲ್ಲಾ ವರ್ಗದ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆ. ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆ. ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ 2 ಹೆ. ಪ್ರದೇಶದ ವರೆಗೆ ಶೇ. 90 ಹಾಗೂ 2 ಹೆ. ಮೇಲ್ಪಟ್ಟು 5 ಹೆ. ವರೆಗೆ ಶೇ. 45 ಸಹಾಯಧನ ನೀಡಲಾಗುವುದು. ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪೆನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಬೇಕು. ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದರಿಂದ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ರೈತರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.

ಆಸಕ್ತ ರೈತರು ಅರ್ಜಿ, ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರ, ಜಾತಿ ಪ್ರಮಾಣ ಪತ್ರ ಹಾಗೂ ಹನಿ/ತುಂತುರು ನೀರಾವರಿ ಅಳವಡಿಸುವ ಕಂಪನಿಯ ವಿವರದೊಂದಿಗೆ ಇಲಾಖೆಯ ತಾಲೂಕು ಕಛೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.), ಉಡುಪಿ ದೂ.ಸಂಖ್ಯೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ ತಾಲೂಕು ದೂ.ಸಂಖ್ಯೆ: 0820-2522837, ಕುಂದಾಪುರ ತಾಲೂಕು ದೂ.ಸಂಖ್ಯೆ: 08254- 230813 ಹಾಗೂ ಕಾರ್ಕಳ ತಾಲೂಕು ದೂ.ಸಂಖ್ಯೆ: 08258-230288 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!