Wednesday, October 23, 2024
Wednesday, October 23, 2024

ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

Date:

ಉಡುಪಿ, ಸೆ.2: ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನ ಗುರಿಯನ್ನು ಹೊಂದಿ ಅನುಷ್ಠಾನಗೊಂಡಿರುವ ಕೃಷಿ ಭಾಗ್ಯ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮರುಜಾರಿಗೊಳಿಸಲಾಗಿರುತ್ತದೆ. ಅದೇ ರೀತಿ ಕೃಷಿ ಭಾಗ್ಯ- ಎಸ್.ಡಿ.ಎಂ.ಎಫ್ ಯೋಜನೆಯನ್ನು ಜಿಲ್ಲೆಯ ಬರ ಪೀಡಿತ ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿರುತ್ತದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಘಟಕಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ, ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕದಡಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!