Wednesday, October 23, 2024
Wednesday, October 23, 2024

ಉಡುಪಿಗೆ ಹೋಗುತ್ತಿದ್ದ ಸಾರಿಗೆ ಬಸ್ ಮೆಟ್ಟಿಲು ತುಂಡಾದ ವಿಡಿಯೋ: ಎಚ್ಚರ ವಹಿಸುವಂತೆ ಸಿಎಂ ಕಚೇರಿಯಿಂದ ಸೂಚನೆ

ಉಡುಪಿಗೆ ಹೋಗುತ್ತಿದ್ದ ಸಾರಿಗೆ ಬಸ್ ಮೆಟ್ಟಿಲು ತುಂಡಾದ ವಿಡಿಯೋ: ಎಚ್ಚರ ವಹಿಸುವಂತೆ ಸಿಎಂ ಕಚೇರಿಯಿಂದ ಸೂಚನೆ

Date:

ಬೆಂಗಳೂರು, ಸೆ.2: ಕಾರ್ಕಳದಿಂದ ಉಡುಪಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಒಂದರ ಹಿಂದಿನ ಬಾಗಿಲಿನ ಮೆಟ್ಟಿಲು ತುಂಡಾಗಿ ರಸ್ತೆಗೆ ಉಜ್ಜಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಒದಗಿಸಿ, ಪರಿಶೀಲಿಸುವಂತೆ ಸೂಚಿಸಿದ್ದರು.

ಆಗಸ್ಟ್‌ 29ರಂದು ಬೆಳಗ್ಗೆ ಸಂಭವಿಸಿದ ಘಟನೆ ಇದಾಗಿದ್ದು, ಪ್ರಸಕ್ತ ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲಿ ಎದುರಾದ ಏರುತಗ್ಗುಗಳ ಪರಿಣಾಮ ಹಿಂದಿನ ಬಾಗಿಲಿನ ಮೆಟ್ಟಿಲು ನೆಲಕ್ಕೆ ಬಡಿದು ತುಂಡಾಗಿದೆ. ಸ್ವಲ್ಪ ದೂರದವರೆಗೆ ನೆಲಕ್ಕೆ ಉಜ್ಜಿಕೊಂಡು ಬಂದಿದ್ದರಿಂದ ಕೀರಲು ಶಬ್ದ ಮಾಡಿದೆ. ತಕ್ಷಣ ಎಚ್ಚೆತ್ತುಕೊಂಡ ನಿರ್ವಾಹಕ ಹಾಗೂ ಚಾಲಕ ಬಸ್‌ ನಿಲ್ಲಿಸಿ ಪರಿಶೀಲಿಸಿದ್ದಾರೆ. ಬಳಿಕ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಹಿಂದೆ ಬರುತ್ತಿದ್ದ ಬಸ್‌ಗೆ ಹತ್ತಿಸಿ ಕಳುಹಿಸಿಕೊಟ್ಟಿದ್ದಾರೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿ ತೊಂದರೆಯಾಗಿಲ್ಲ.

ಕಾಮಗಾರಿಯಲ್ಲಿದ್ದ ರಸ್ತೆಯ ಏರುತಗ್ಗುಗಳನ್ನು ನಿಭಾಯಿಸುವ ಸಂದರ್ಭ ಮೆಟ್ಟಿಲು ತುಂಡಾಗಿದ್ದೇ ವಿನಃ ಬೇರೆ ಯಾವ ಕಾರಣಗಳಿಂದಲ್ಲ ಎಂಬುದು ಪ್ರಾಥಮಿಕ ನೋಟಕ್ಕೆ ತಿಳಿದುಬಂದಿದೆ. ಆದರೂ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ತಾಂತ್ರಿಕ ಸಿಬ್ಬಂದಿಗಳು, ಮೇಲ್ವಿಚಾರಕರು ಹಾಗೂ ಘಟಕ ವ್ಯವಸ್ಥಾಪಕರಿಗೆ ಈ ಬಗ್ಗೆ ಸಮಜಾಯಿಷಿ ನೀಡುವಂತೆ, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!