Thursday, September 19, 2024
Thursday, September 19, 2024

ಶಿಕ್ಷಕರಿಂದ ಕಲಿತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ

ಶಿಕ್ಷಕರಿಂದ ಕಲಿತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ

Date:

ಉಡುಪಿ, ಸೆ.5: ನಿಸ್ವಾರ್ಥ ಭಾವದಿಂದ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವ ಶಿಕ್ಷಕರ ಸೇವೆಯನ್ನು ಶಿಕ್ಷಕರ ದಿನಾಚರಣೆಯಂದು ಮಾತ್ರವಲ್ಲದೇ ಜೀವನದುದ್ದಕ್ಕೂ ನೆನಯವುದರ ಜೊತೆಗೆ ಅವರಿಂದ ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಕಿದಿಯೂರು ಹೋಟೆಲ್‌ನ ಶೇಷಶಯನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇವರ ಸಹಯೋಗದಲ್ಲಿ ಡಾ. ಎಸ್ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯುವಜನತೆಯು ಅನೇಕ ಕಾರಣಗಳಿಂದ ನಾನಾ ದುಷ್ಚಟಗಳಿಂದ ಒಳಗಾಗುವುದನ್ನು ತಡೆಗಟ್ಟಲು ಬಾಲ್ಯದಿಂದಲೇ ಅವರಿಗೆ ಜೀವನ ನಿರ್ವಹಣೆ ಆದರ್ಶವನ್ನು ಮನದಟ್ಟುಗೊಳಿಸಿ ಮಗುವಿನ ವ್ಯಕ್ತಿತ್ವ ಜೊತೆಗೆ ದೇಶದ ಉತ್ತಮ ಪ್ರಜೆಯಾಗಿ ರೂಪಿಸುವಂತಹ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಜವಾಬ್ದಾರಿಯಾಗಿರುತ್ತದೆ ಎಂದರು.

ರಾಜ್ಯದಲ್ಲಿಯೇ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಕಳೆದ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.94 ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಜಿಲ್ಲೆಯ ಪ್ರತಿಯೊಬ್ಬರಿಗೂ ಹೆಗ್ಗಳಿಕೆ ವಿಚಾರವಾಗಿದೆ. ಮುಂದಿನ ಬಾರಿ ಪ್ರತಿಶತಃ ನೂರರಷ್ಟು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರುಗಳು ಕಾರ್ಯಪ್ರವೃತ್ತರಾಗಬೇಕು ಎಂದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜದಲ್ಲಿ ಗೌರವ ಇಟ್ಟುಕೊಂಡ ವ್ಯವಸ್ಥೆಯೆಂದರೆ ಶಿಕ್ಷಣ ಮತ್ತು ಶಿಕ್ಷಕರುಗಳು. ವಿದ್ಯಾರ್ಥಿಗಳ ಏಳಿಗೆಯಲ್ಲಿ ತಮ್ಮ ಯಶಸ್ಸನ್ನು ಕಂಡುಕೊಳ್ಳುವ ಶಿಕ್ಷಕರುಗಳು ಮಕ್ಕಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆ ನಿಲ್ಲುತ್ತಾರೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ಶಿಕ್ಷಣವೂ ಪ್ರಮುಖ ಪಾತ್ರ ವಹಿಸುತ್ತದೆ. ಅಂತರಂಗವನ್ನು ಬೆಳೆಸುವ ವ್ಯವಸ್ಥೆಯೇ ಶಿಕ್ಷಣ. ಅಂತಹ ಶಿಕ್ಷಣವನ್ನು ನೀಡುವ ಗುರುಗಳನ್ನು ಗೌರವದಿಂದ ಕಾಣಬೇಕಾದದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮಗುವನ್ನು ಬೆಳಸುವಲ್ಲಿ ತಾಯಿಯು ಮಹತ್ತರ ಪಾತ್ರ ವಹಿಸಿದರೆ, ಮಗುವಿನ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದುದು. ಶಿಕ್ಷಕರುಗಳು ತಾಳ್ಮೆಯಿಂದ ಪಾಠ-ಪ್ರವಚನಗಳು, ಪಠ್ಯೇತರ ಚಟುವಟಿಕೆಗಳ ಜೊತೆಗೆ ಬದುಕಿನ ಮೌಲ್ಯಗಳನ್ನು ನೀಡುತ್ತಿದ್ದಾರೆ. ಇದರ ಜೊತೆಗೆ ಇನ್ನೂ ಉತ್ತಮ ರೀತಿಯಲ್ಲಿ ನೀಡಬೇಕು ಎಂದರು. ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಡಾ. ಜಿ.ಶಂಕರ್, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಕರುಗಳು ಉತ್ತಮ ಶಿಕ್ಷಣವನ್ನು ನೀಡಬೇಕು ಎಂದರು. ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲ್ಯದಲ್ಲಿಯೇ ಗುಣಮಟ್ಟದ ಶಿಸ್ತುಬದ್ದ ಶಿಕ್ಷಣವನ್ನು ಶಿಕ್ಷಕರು ನೀಡುತ್ತಾ ಬರುತ್ತಿದ್ದಾರೆ. ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ಉತ್ತಮ ಸಾಧನೆಗೈದಿದ್ದು ಇದಕ್ಕೆ ಮುಖ್ಯ ಕಾರಣೀಕರ್ತರು ಶಿಕ್ಷಕರು. ಜಿಲ್ಲೆಯನ್ನು ಬುದ್ದಿವಂತರ ನಾಡು ಎಂದೇ ಗುರುತಿಸಿದ್ದು ಮುಂದಿನ ದಿನಗಳಲ್ಲಿ ಈ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸುವುದು ಅತ್ಯಗತ್ಯ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹಾಗೂ ಸನ್ಮಾನಿತರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರುಗಳನ್ನು ಹಾಗೂ ಉಡುಪಿ ವಲಯದ ನಿವೃತ್ತ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ, ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕ-ಶಿಕ್ಷಕಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ್ ಮತ್ತು ಜ್ಯೋತಿ ನಿರೂಪಿಸಿದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!