ಉಡುಪಿ, ಸೆ.5: ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಇಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶಂಕರ್ ಆಚಾರ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ದೈಹಿಕ ಪರಿವೀಕ್ಷಣಾ ಅಧಿಕಾರಿ ರವಿಚಂದ್ರ ಕಾರಂತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ ಆಚಾರಿ, ಅನುದಾನಿತ ಶಿಕ್ಷಕರ ಸಂಘದ ಉಪಾಧ್ಯಕ್ಷ ಅಣ್ಣಪ್ಪ, ಮುಖ್ಯೋಪಾಧ್ಯಾಯರ ಸಂಘದ ಕಾರ್ಯದರ್ಶಿ ವಿಜಯ, ಕಲ್ಯಾ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರಿ ಜೀವನ್ ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪಂಚಾಯತ್ ಸದಸ್ಯರಾದ ಜಗದೀಶ್ ಆಚಾರ್ಯ, ಪ್ರೇಮ ಪೂಜಾರ್ತಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಯತೀಶ್ ಎನ್., ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಸಂತೋಷ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕಸ್ತೂರಿ ವಸಂತ್ ಸ್ವಾಗತಿಸಿ, ಸಹ ಶಿಕ್ಷಕಿ ಅನಿತಾ ವಂದಿಸಿದರು. ಶಾರದಾ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಕಲ್ಯಾ ಶಾಲೆಯ ದೈಹಿಕ ಶಿಕ್ಷಕರಾದ ವಸಂತ್ ನಾಯ್ಕ ತೀರ್ಪುಗಾರರಾಗಿ ಆಗಮಿಸಿದ ಎಲ್ಲಾ ದೈಹಿಕ ಶಿಕ್ಷಕರನ್ನು ಹಾಗೂ ಕ್ರೀಡಾಕೂಟಕ್ಕೆ ಸಹಕರಿಸಿ ದಾನಿಗಳನ್ನು ಗುರುತಿಸಿ ಗೌರವಿಸಿದರು.