Monday, January 20, 2025
Monday, January 20, 2025

ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟ್ ಮಾಡಲು ಅವಕಾಶ

ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟ್ ಮಾಡಲು ಅವಕಾಶ

Date:

ಉಡುಪಿ, ಸೆ.10: ಪ್ರವಾಸೋದ್ಯಮವನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಸೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ‘ದೇಕೋ ಅಪ್ನಾ ದೇಶ್, ಪೀಪಲ್ಸ್ ಚಾಯ್ಸ್-2024’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಸದರಿ ಕಾರ್ಯಕ್ರಮದ ಭಾಗವಾಗಿ ನಾಗರಿಕರು ಹಾಗೂ ಪ್ರವಾಸಿಗರು ಆದ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು MyGov ವೇದಿಕೆಯಡಿಯಲ್ಲಿ ಸೆಪ್ಟೆಂಬರ್ 15 ರವರೆಗೆ ವೋಟ್ ಮಾಡುವ ಅವಕಾಶ ಕಲ್ಪಿಸಲಾಗಿರುತ್ತದೆ.

ಈ ಸಂಬಂಧ ಸದರಿ ಕ್ಯಾಂಪೇನ್ ಅಡಿಯಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖಾ ವತಿಯಿಂದ ರಾಜ್ಯದಲ್ಲಿನ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆ ಮಾಡಲು ತಾವು ಈಗಾಗಲೇ ಭೇಟಿ ನೀಡಿರುವ ಕನಿಷ್ಠ ಒಂದು ಆಕರ್ಷಣೆಯನ್ನು ಆಯ್ಕೆ ಮಾಡುವುದು ಕಡ್ಡಾಯವಾಗಿರುತ್ತದೆ ಮತ್ತು ತಾವು ಭವಿಷ್ಯದಲ್ಲಿ ಭೇಟಿ ನೀಡಲು ಬಯಸುವ ಕನಿಷ್ಠ ಒಂದು ಆಕರ್ಷಣೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಈ ವೇಳೆ ಲಿಂಕ್‌ನಲ್ಲಿ ತಮ್ಮ ಮೊಬೈಲ್ ನಂಬರ್, ಹೆಸರು, ವಯಸ್ಸು, ರಾಜ್ಯ ಸೇರಿದಂತೆ ಪ್ರಾಥಮಿಕ ಮಾಹಿತಿ ಪೂರ್ತಿ ಮಾಡಿ ಓ.ಟಿ.ಪಿ ಮೂಲಕ ಲಾಗಿನ್ ಆಗಿ ದೇಶದ ಯಾವುದೇ ಪ್ರವಾಸಿ ಸ್ಥಳದ ಕುರಿತು ವೋಟ್ ಮಾಡಬಹುದಾಗಿದೆ. ದೇಶದ ಹಲವು ಪ್ರವಾಸಿ ತಾಣಗಳಲ್ಲಿ ಜಿಲ್ಲೆಯ 15 ಪ್ರವಾಸಿ ತಾಣಗಳನ್ನು ಸೇರಿಸಲಾಗಿರುತ್ತದೆ. ಇದರಿಂದ ಗುರುತಿಸಲಾದ ವಿಜೇತ ಆಕರ್ಷಣೀಯ ತಾಣಗಳನ್ನು ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಅಡಿಯಲ್ಲಿ ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವುದರೊಂದಿಗೆ ಇದು ಭಾರತದ ವಿಕ್ಷಿತ್ ಭಾರತ್ @ 2047 ಕಡೆಗೆ ಪ್ರಯಾಣಕ್ಕೆ ಕೊಡುಗೆ ನೀಡುತ್ತದೆ.

ವೋಟಿಂಗ್‌ನಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕೇಂದ್ರ ಸರಕಾರದಿಂದ ಅವರುಗಳ ಹೆಸರಿನಲ್ಲಿನ ಇ-ಪ್ರಮಾಣ ಪತ್ರ ದೊರೆಯಲಿದೆ. ಸಾರ್ವಜನಿಕರು https://innovateindia.mygov.in/ deskho-apna-desh/login/ವೆಬ್ ಲಿಂಕ್ ಬಳಿಸಿ ಜಿಲ್ಲೆಯ ಮೆಚ್ಚಿನ ಪ್ರವಾಸಿ ತಾಣದ ಕುರಿತು ವೋಟ್ ಮಾಡಬಹುದಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ, ಜ.20: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ...

ಸಂಸ್ಕಾರಭರಿತ ಶಿಕ್ಷಣಕ್ಕೆ ಸೇವಾ ಸಂಗಮದ ಕಾರ್ಯ ಶ್ಲಾಘನೀಯ: ಕೆ.ಅನಂತಪದ್ಮನಾಭ ಐತಾಳ್

ಕೋಟ, ಜ.20: ಸೇವಾ ಸಂಗಮ ಶಿಶು ಮಂದಿರ ಸಂಸ್ಕಾರಭರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ....

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...
error: Content is protected !!