Thursday, November 21, 2024
Thursday, November 21, 2024

ಕುಂದಾಪುರ: ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕುಂದಾಪುರ: ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

ಉಡುಪಿ, ಸೆ.9: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು.

ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ. 23: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ನ.21: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ನವೆಂಬರ್ 23...

ದೇಶದ ಉನ್ನತಿಗೆ ಮಹಿಳೆಯ ಕೊಡುಗೆ ಅನನ್ಯ: ವಿವೇಕ್ ಆಳ್ವ

ಮೂಡುಬಿದಿರೆ, ನ.21: ಕೆಲವು ದೇಶಗಳು ಆರ್ಥಿಕವಾಗಿ ಹಿಂದುಳಿಯಲು ಮಹಿಳಾ ಉದ್ಯೋಗಿಗಳ ಪ್ರಮಾಣ...

ಪ್ರಧಾನಿ ನರೇಂದ್ರ ಮೋದಿಯವರಿಗೆ ಗಯಾನಾದ ಅತ್ಯುನ್ನತ ಪ್ರಶಸ್ತಿ ‘ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರದಾನ

ಯು.ಬಿ.ಎನ್.ಡಿ., ನ.21: ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ...

ಮಣಿಪಾಲ ಕೆ.ಎಂ.ಸಿ: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ

ಮಣಿಪಾಲ, ನ.21: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ...
error: Content is protected !!