Wednesday, October 23, 2024
Wednesday, October 23, 2024

ಸರ್ಕಾರದ ಇಲಾಖೆಗಳಲ್ಲಿನ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಸರ್ಕಾರದ ಇಲಾಖೆಗಳಲ್ಲಿನ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ

Date:

ಉಡುಪಿ, ಸೆ.10: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಅದ್ದರಿಂದ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ, ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ.60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇ. 40 ರಷ್ಟು ಅಂಗ್ಲಭಾಷೆಯಲ್ಲಿ ಪ್ರದರ್ಶಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ: ಸುವರ್ಣ ಮಹೋತ್ಸವ

ಕೋಟ, ಅ.23: ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಸುವರ್ಣ...

ಸಂಜಿತ್ ಎಂ ದೇವಾಡಿಗ ಸಾಕ್ಸೋಫೋನ್ ವಾದನ ಸೇವೆ

ಗಂಗೊಳ್ಳಿ, ಅ.23: ಗಂಗೊಳ್ಳಿಯ ಸೇವಾ ಸಂಘ (ರಿ) ಸಾರ್ವಜನಿಕ ಶ್ರೀ ಶಾರದೋತ್ಸವ...
error: Content is protected !!