Wednesday, October 23, 2024
Wednesday, October 23, 2024

ಡಾ. ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆ

ಡಾ. ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆ

Date:

ಕೋಟ, ಸೆ.11: ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಸರೆಯಲ್ಲಿ ಕೊಡಮಾಡುವ ಡಾ. ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಸ.ಹಿ.ಪ್ರಾ.ಶಾಲೆ ಸಾಸ್ತಾವು ಪ್ರಭಾರ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಯ್ಬ್ರಕಟ್ಟೆ ಶಿಕ್ಷಕ ಸುರೇಂದ್ರ ಕೋಟ, ವಿವೇಕ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ, ಹಿಂದು ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಶಿಕ್ಷಕ ಮಂಜುನಾಥ, ಸ.ಹಿ.ಪ್ರಾ. ಶಾಲೆ ಉಪ್ಪೂರು ಬ್ರಹ್ಮಾವರ ಶಿಕ್ಷಕಿ ಚೆಲುವ ಕುಮಾರಿ, ಸ.ಹಿ.ಪ್ರಾ. ಶಾಲೆ ಹೆಸಕುತ್ತೂರು ಮುಖ್ಯ ಶಿಕ್ಷಕ ಶೇಖರ್, ಸರಕಾರಿ ಪ್ರೌಢಶಾಲೆ ಕುಕ್ಕೆಹಳ್ಳಿ ಶಿಕ್ಷಕಿ ಲಿನಟ್ ವಾರ್ತಾ ಡಿಸೋಜ, ಸ.ಹಿ.ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಶಿಕ್ಷಕಿ ಚಂದ್ರಮತಿ ದೇವಾಡಿಗ, ಸರಕಾರಿ ಪ್ರೌಢಶಾಲೆ ಕಾವಡಿ ಶಿಕ್ಷಕ ಪ್ರಶಾಂತ್ ಜತ್ತನ್, ಸರಕಾರಿ ಸಂಯುಕ್ತ ಪ್ರೌಢಶಾಲೆ(ಪ್ರಾಥಮಿಕ ಭಾಗ)ಮಣೂರು ದೈಹಿಕ ಶಿಕ್ಷಕ ನಾರಾಯಣ ಮೋಗವೀರ ಅವರು ಆಯ್ಕೆಯಾಗಿದ್ದಾರೆ.

ಪುರಸ್ಕಾರವನ್ನು ಸೆಪ್ಟೆಂಬರ್ 16 ರಂದು ಸಂಜೆ 3 ಗಂಟೆಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!