Wednesday, October 23, 2024
Wednesday, October 23, 2024

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Date:

ಉಡುಪಿ, ಸೆ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ. ಸ್ಪರ್ಧೆಗಳ ವಿವಿರ:

ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ. ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ: ಸುವರ್ಣ ಮಹೋತ್ಸವ

ಕೋಟ, ಅ.23: ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಸುವರ್ಣ...

ಸಂಜಿತ್ ಎಂ ದೇವಾಡಿಗ ಸಾಕ್ಸೋಫೋನ್ ವಾದನ ಸೇವೆ

ಗಂಗೊಳ್ಳಿ, ಅ.23: ಗಂಗೊಳ್ಳಿಯ ಸೇವಾ ಸಂಘ (ರಿ) ಸಾರ್ವಜನಿಕ ಶ್ರೀ ಶಾರದೋತ್ಸವ...
error: Content is protected !!