Friday, September 20, 2024
Friday, September 20, 2024

ಎಲೆಕ್ಟ್ರಿಕ್‌ ವಾಹನ ಬಳಕೆದಾರರಿಗೆ ಹೊಸ ರೂಪದಲ್ಲಿ ʼಇವಿ ಮಿತ್ರʼ ಆ್ಯಪ್‌

ಎಲೆಕ್ಟ್ರಿಕ್‌ ವಾಹನ ಬಳಕೆದಾರರಿಗೆ ಹೊಸ ರೂಪದಲ್ಲಿ ʼಇವಿ ಮಿತ್ರʼ ಆ್ಯಪ್‌

Date:

ಬೆಂಗಳೂರು, ಸೆ.12: ಎಲೆಕ್ಟ್ರಿಕ್‌ ವಾಹನ (ಇವಿ) ಬಳಕೆದಾರರಿಗೆ ಚಾರ್ಜಿಂಗ್‌ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವ ಬೆಸ್ಕಾಂನ ʼಇವಿ ಮಿತ್ರʼ ಆ್ಯಪ್‌ ಈಗ ಹೊಸ ರೂಪದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿದೆ. ಆಂಡ್ರಾಯ್ಡ್‌ ಮತ್ತು ಐಒಎಸ್‌ ಎರಡು ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ʼಇವಿ ಮಿತ್ರʼ ಆ್ಯಪ್‌, ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಜಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಜಿಂಗ್‌ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ.

ಗ್ರಾಹಕರು ಹಳೆಯ ʼಇವಿ ಮಿತ್ರʼ ಆ್ಯಪ್‌ ಡಿಲೀಟ್‌ ಮಾಡಿ https://play.google.com/store/apps/details?id=com.bescom.evmithra ಲಿಂಕ್‌ ಮೂಲಕ ಹೊಸ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಆ ಹಣ ವರ್ಗಾವಣೆಯಾಗುತ್ತದೆ.

ಕನ್ನಡ, ಇಂಗ್ಲಿಷ್‌, ಹಿಂದಿ ಹಾಗೂ ಪ್ರಾದೇಶಿಕ ಭಾಷೆಗಳು ಸೇರಿದಂತೆ 11 ಭಾಷೆಗಳಲ್ಲಿ ಇವಿ ಚಾರ್ಜಿಂಗ್‌ ಮಾಹಿತಿ ಲಭ್ಯವಿದ್ದು, ಹಣ ಪಾವತಿಗೆ ಹಲವು ಆಯ್ಕೆಗಳೂ ಇವೆ. ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್‌, ಪ್ರೊಫೈಲ್‌ ಇರುತ್ತದೆ.

ಬಳಕೆ ಹೇಗೆ?
– ಆ್ಯಪ್‌ ಡೌನ್ಲೋಡ್‌ ಮಾಡಿದ ನಂತರ ನಿಮ್ಮ ಫೋನ್‌ ನಂಬರ್‌ ನಮೂದಿಸಿ, ಲಾಗಿನ್‌ ಆಗಿ.
– ನಿಮ್ಮ ಮೊಬೈಲ್‌ಗೆ ಬರುವ ಒಟಿಪಿ ಸಂಖ್ಯೆ ದಾಖಲಿಸಿದ ನಂತರ, ಲಾಗಿನ್‌ ಖಚಿತವಾಗುತ್ತದೆ.
– ಖಾಸಗಿ ಹಾಗೂ ವಾಣಿಜ್ಯ ಬಳಕೆದಾರರು ಈ ಒಂದೇ ಆ್ಯಪ್‌ ಮೂಲಕ ಚಾರ್ಜಿಂಗ್‌ ಸೌಲಭ್ಯ ಪಡೆಯಬಹುದು.
– ಮ್ಯಾಪ್‌ ಮೂಲಕ ಚಾರ್ಜಿಂಗ್‌ ಕೇಂದ್ರಗಳ ಮಾಹಿತಿ ತಿಳಿದುಕೊಳ್ಳಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!