ಉಡುಪಿ, ಸೆ.12: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ- ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಸೆಪ್ಟಂಬರ್ 30 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.