Wednesday, October 23, 2024
Wednesday, October 23, 2024

ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ: ವಿವಿಧ ಸ್ಪರ್ಧೆ

ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ: ವಿವಿಧ ಸ್ಪರ್ಧೆ

Date:

ಉಡುಪಿ, ಸೆ.12: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯುವ ಜನೋತ್ಸವ ಕಾರ್ಯಕ್ರಮವು ಸೆಪ್ಟಂಬರ್ 21 ರಂದು ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕನ್ನಡ, ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಜನಪದ ನೃತ್ಯ (ಗುಂಪು ಸ್ಪರ್ಧೆ/ ವೈಯಕ್ತಿಕ) ಮತ್ತು ಜನಪದ ಹಾಡು (ಗುಂಪು ಸ್ಪರ್ಧೆ / ವೈಯಕ್ತಿಕ), ಕಥೆ ಬರೆಯುವುದು, ಕವಿತೆ ಬರೆಯುವುದು, ಭಿತ್ತಿ ಪತ್ರ ತಯಾರಿಕೆ ಹಾಗೂ ಘೋಷಣೆ ಸ್ಪರ್ಧೆಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವ ಜಿಲ್ಲೆಯ 15 ರಿಂದ 29 ವರ್ಷದೊಳಗಿನ ಯುವಕ-ಯುವತಿಯರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ತಂಡದ ಹೆಸರನ್ನು [email protected] ಗೆ ಸೆಪ್ಟಂಬರ್ 19 ರ ಒಳಗಾಗಿ ಕಳುಹಿಸಬಹುದಾಗಿದೆ. ಸ್ಪರ್ಧಿಗಳು ಸ್ಪರ್ಧೆ ನಡೆಯುವ ದಿನದಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!