Wednesday, October 23, 2024
Wednesday, October 23, 2024

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

Date:

ಉಡುಪಿ, ಸೆ.12: ಜಿಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇವರ ವತಿಯಿಂದ ಮಂಗಳವಾರ ಹಿರ್ಗಾನದ ಕ್ರಿಯೆಟೆವ್ ಪಿ.ಯು ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಕ್ಯಾಥರೀನ್ ಜೆನ್ನಿಫರ್ ಮಾತನಾಡಿ, ಸ್ಫರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿಯನ್ನು ಅನುಸರಿಸದೇ ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಪ್ರಾಸ್ತಾವಿಕವಾಗಿ ಮಾತನಾಡಿ, ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ ಎಂದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್.ಎಚ್, ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಸಮುದಾಯದ ಪಾತ್ರ ಎಂಬ ವಿಷಯದ ಕುರಿತು ಕರಪತ್ರ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಮಾ, ಆಶಾ ಕಾರ್ಯಕರ್ತೆ ಸುಜಾತ, ಬೋಧಕ ಮತ್ತು ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅರ್ಥಶಾಸ್ತç ಉಪನ್ಯಾಸಕ ಉಮೇಶ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!