Thursday, September 19, 2024
Thursday, September 19, 2024

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

Date:

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾಯ್ಬ್ರಕಟ್ಟೆಯ ರೋಹಿತ್ ನಾಯಕತ್ವದ ಬಾಲಕರ ತಂಡ ದೊಡ್ಡ ಅಂತರದಲ್ಲಿ ಎದುರಾಳಿ ತಂಡಗಳನ್ನು ಮಣಿಸಿ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ಅಕ್ಟೋಬರ್‌ನಲ್ಲಿ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದ ವಂಶಿತ್ ಪಂದ್ಯಾಟದ ಬೆಸ್ಟ್ ಆಲ್ ರೌಂಡರ್ ಮತ್ತು ಮಹಾರಾಜ ಬೆಸ್ಟ್ ಡಿಫೆಂಡರ್ ಆಗಿ ವೈಯಕ್ತಿಕ ಪ್ರಶಸ್ತಿಯನ್ನು ಗೆದ್ದಿದ್ದಾರೆ.ವಿದ್ಯಾರ್ಥಿಗಳನ್ನು ದೈಹಿಕ ಶಿಕ್ಷಕರಾದ ಗಜೇಂದ್ರ ಶೆಟ್ಟಿ ತರಬೇತಿ ನೀಡಿದ್ದಾರೆ. ಶಾಲೆಯ ಈ ತಂಡದ ಸಾಧನೆಯನ್ನು ಹಳೆ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ ಹಾಗೂ ಸ್ಥಳೀಯ ಸಂಘ ಸಂಸ್ಥೆಯವರು ಹರ್ಷ ವ್ಯಕ್ತಪಡಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!