Wednesday, December 4, 2024
Wednesday, December 4, 2024

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

Date:

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ., ವತಿಯಿಂದ ಸಂಚಾರಿ ಕುರಿಗಾಹಿಗಳಿಗೆ / ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರು / ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟಂಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಸ್ಥಳೀಯ ಪಶು ಚಿಕಿತ್ಸಾಲಯ / ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿರವರನ್ನು ಅಥವಾ ಆಯಾ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಅಥವಾ ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಉಡುಪಿ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!