Sunday, December 22, 2024
Sunday, December 22, 2024

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

Date:

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟ್ರೀಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್‌ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಯಾದ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ದಿಯಲ್ಲಿ ಯುವ ರೆಡ್‌ಕ್ರಾಸ್ ಘಟಕ ಬೇರೆ ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿ, ಪ್ರಾಸ್ತಾವಿಸಿದರು. ಸಹ ಸಂಯೋಜಕಿಯಾದ ಮಾಲತಿ ವಂದಿಸಿದರು. ವಿದ್ಯಾರ್ಥಿನಿ ದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಹಾಸ್ ಜೆ.ಜಿ. ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಧ್ಯಾನ ದಿನಾಚರಣೆ

ಉಡುಪಿ, ಡಿ.22: ಭಗವದ್ಗೀತೆಯಲ್ಲಿ ಧ್ಯಾನ ಯೋಗದ ಮಹತ್ವವನ್ನು ಗೀತಾಚಾರ್ಯ ಭಗವಾನ್ ಶ್ರೀಕೃಷ್ಣ...

ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಜಿಲ್ಲಾಧಿಕಾರಿ

ಉಡುಪಿ, ಡಿ.21: ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ...

ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಉದ್ಘಾಟನೆ

ಉಡುಪಿ, ಡಿ.21: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ...

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಡಿ.21: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ...
error: Content is protected !!