Sunday, December 22, 2024
Sunday, December 22, 2024

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

Date:

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ.ಸತೀಶ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು,ನುಡಿ, ಸಂಸ್ಕೃತಿಗೆ ಸಂಬಂಧಿಸಿದ ಭಾವಗೀತೆಗಳ ಸಮೂಹಗಾನ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಜಿಲ್ಲೆಯ 16 ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕರಾದ ಪ್ರೊ. ರಾಮೇಗೌಡ ಎಂ ಇವರು ಸ್ಪರ್ಧೆಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಅವರು ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ದೇವಿ ಪ್ರಸಾದ್ ಹಾಗೂ ಲಲಿತಕಲಾ ಸಂಘದ ಹಾಗೂ ಸ್ಪರ್ಧೆಗಳ ಸಂಯೋಜಕರಾದ ಡಾ. ಕೃಷ್ಣಪ್ರಭ ಉಪಸ್ಥಿತರಿದ್ದರು. ಐಕ್ಯೂಎಸಿ ಸಹ ಸಂಯೋಜಕರಾದ ಡಾ. ಜ್ಯೋತಿಪ್ರಿಯ ಕಾರ್ಯಕ್ರಮ ನಿರ್ವಹಿಸಿದರು. ಜಯಲಕ್ಷ್ಮಿ ಹಾಗೂ ಸಂಧ್ಯಾರಾಣಿ ತೀರ್ಪುಗಾರರಾಗಿ ಸಹಕರಿಸಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಪುತ್ತೂರು, ಬೆಸಂಟ್ ಮಹಿಳಾ ಕಾಲೇಜು, ಕೊಡಿಯಾಲ್ ಬೈಲ್, ಮಂಗಳೂರು ಹಾಗೂ ಕೆನರಾ ಕಾಲೇಜು ಮಂಗಳೂರು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದುಕೊಂಡವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿರ್ವ: ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

ಶಿರ್ವ, ಡಿ.22: ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆ ಶಿರ್ವ ಇದರ 18...

ಫೆ.29 ರಿಂದ ಗ್ಲಿಂಪ್ಸಸ್ ಆಫ್ ಕರ್ನಾಟಕ ಪ್ರವಾಸ

ಬೆಂಗಳೂರು, ಡಿ.22: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭಗೊಂಡಿದ್ದು, ಫೆಬ್ರವರಿ 29...

ರಾಜ್ಯಮಟ್ಟದ ಶಿಷ್ಯವೇತನಕ್ಕೆ ಆಯ್ಕೆ

ಉಡುಪಿ, ಡಿ.22: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯವರು ನೀಡುವ ರಾಜ್ಯ ಮಟ್ಟದ...
error: Content is protected !!