ಉಡುಪಿ, ಸೆ.20: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ. ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ‘ಸಹಕಾರ’ ಕುರಿತು ಹಮ್ಮಿಕೊಂಡಿದ್ದ ಚರ್ಚಾ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶಾಧನಾ ದೇವಾಡಿಗ ಇವರು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕುಂದಾಪುರ ಸಮೀಪದ ಕಾಳಾವರದ ಉಮೇಶ್ ಮತ್ತು ವಿನೋದ ದಂಪತಿಗಳ ಪುತ್ರಿ. ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಚರ್ಚಾ ಸ್ಪರ್ಧೆ: ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ
ಚರ್ಚಾ ಸ್ಪರ್ಧೆ: ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ
Date: