ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ. ಯೋಜನೆಯ ಅನುದಾನದ ಸಹಾಯದಿಂದ ರಚಿಸಿದ ಹ್ಯಾಪಿ ಇಂಗ್ಲೀಷ್ ಕ್ಲಾಸ್ ಅನ್ನು ಉದ್ಘಾಟಿಸಲಾಯಿತು. ಶಾಲೆಯ ನಲಿ-ಕಲಿ ವಿದ್ಯಾರ್ಥಿಗಳಿಗೆ ರೌಂಡ್ ಟೇಬಲ್ ಗಳನ್ನು ಕೊಡುಗೆಯಾಗಿ ನೀಡಿದ ಲಯನ್ಸ್ ಮಿಡ್ ಟೌನ್ ಉಡುಪಿಯ ಲಯನ್ ಅನಂತ ಶೆಟ್ಟಿ ಪಿಎಂ.ಶ್ರೀ ಶಾಲಾ ನಾಮಫಲಕವನ್ನು ದಿವಂಗತ ಸೋಮ ಮರಕಾಲ ಇವರ ಸ್ಮರಣಾರ್ಥ ಕೊಡುಗೆಯಾಗಿ ನೀಡಿದ ಇವರ ಕುಟುಂಬಸ್ಥರ ಪರವಾಗಿ ರಮೇಶ್ ಸುವರ್ಣ ಬಜೆ ಹಾಗೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟದಲ್ಲಿ ‘ಚಕ್ರ’ ಎಸೆತದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪದವೀಧರ ಸಹಶಿಕ್ಷಕಿ ಅನುಷಾ ಎಸ್.ಶೆಟ್ಟಿ ಇವರೆಲ್ಲರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ದೇವೇಂದ್ರ ಕುಲಾಲ್ ಅವರು ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ ಪ್ರಭಾಕರ್, ಸ್ಥಳೀಯ ಗ್ರಾ.ಪಂಚಾಯತ್ ಪ್ರತಿನಿಧಿ ಶಂಕರ್ ಸಾಲ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಸಾದ್ ಹೆಗ್ಡೆ, ತಾಲೂಕು ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ್ ಬೆಳ್ಳಂಪಳ್ಳಿ ಮತ್ತು ಗುಣಕರ ಹೆಗ್ಡೆ ಕುಕ್ಕೆಹಳ್ಳಿ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರಾದ ಶಶಿಕಲಾ ಭಟ್, ಸಿ.ಆರ್.ಪಿ ಶಾಂತಾ ಹಾಗೂ ಎಸ್.ಡಿ.ಎಂ.ಸಿ ಯ ಎಲ್ಲಾ ಸದಸ್ಯರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಸರಸ್ವತಿ ಸ್ವಾಗತಿಸಿ, ಸಹಶಿಕ್ಷಕರಾದ ಅಶಾ ವಂದಿಸಿದರು. ದೈಹಿಕ ಶಿಕ್ಷಕರಾದ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.