Monday, January 20, 2025
Monday, January 20, 2025

ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ

ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ

Date:

ಉಡುಪಿ, ಸೆ.21: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಡಲ ತೀರ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.

ಅವರು ಶನಿವಾರ ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತರಾಷ್ಟ್ರೀಯ ಕಡಲ ತೀರ ಸ್ವಚ್ಚತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ದಿನ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು. ಸಾರ್ವಜನಿಕರು ಅನುಪಯುಕ್ತ ಪ್ಲಾಸ್ಟಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೀದಿ ಬದಿ ಎಸೆಯುವುದರಿಂದ ಪರಿಸರ ಮಾಲಿನ್ಯ ಆಗುವುದಲ್ಲದೇ, ಅವುಗಳು ಸಮುದ್ರ ತಲುಪಿ ಜಲಚರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ 2 ವಾರಗಳ ಕಾಲ ಸ್ವಚ್ಚತಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದರು.

ಸ್ವಚ್ಛತೆಯ ಧ್ಯೇಯ ವಾಕ್ಯವನ್ನು ಭೋಧಿಸಲಾಯಿತು. ನಂತರ ಕೋಡಿ ಕಡಲತೀರದಲ್ಲಿರುವ ತ್ಯಾಜ್ಯಗಳನ್ನು ವಿಂಗಡಿಸಿ ಸ್ವಚ್ಚ ಗೊಳಿಸಲಾಯಿತು. ಕೇಂದ್ರ ಸರಕಾರದ ಪ್ರತಿನಿಧಿ ಅಮೃತಾ ಗುಪ್ತಾ, ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ರಂಗಸ್ವಾಮಿ, ಸಾಮಾಜಿಕ ಅರಣ್ಯದ ಅರಣ್ಯಾಧಿಕಾರಿ ರವೀಂದ್ರನಾಥ್ ಹಾಗೂ ಕುಂದಾಪುರ ಪುರಸಭೆಯ ಕಾರ್ಯನಿರ್ವಹಣಾಧಿಕಾರಿ ಆನಂದ, ಕುಂದಾಪುರ ಪುರಸಭೆಯ ಅಧಿಕಾರಿಗಳು ಹಾಗೂ ಸ್ವಚ್ಚತಾ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಪರಿಸರ ಇಲಾಖೆ ಹಾಗೂ ಬಿ.ಬಿ.ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎನ್.ಎಸ್.ಎಸ್. ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!