Sunday, September 22, 2024
Sunday, September 22, 2024

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪ.ಜಾ ಮತ್ತು ಪ,ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!