Monday, September 23, 2024
Monday, September 23, 2024

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

Date:

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ಮಾಡಿರುವ ನಿಯಮವನ್ನು ಸಡಿಲಿಕೆ ಮಾಡುವುದು ಹಾಗೂ ವಿವಿಧ ಬೇಡಿಕೆಗಳ ಪರಿಹಾರಕ್ಕಾಗಿ ಟ್ಯಾಕ್ಸಿಮೆನ್ ಅಸೋಸಿಯೇಷನ್ ನಿಯೋಗವು ಮಾಜಿ ಶಾಸಕ ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾದ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಚಿವರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಯಿತು. ಟ್ಯಾಕ್ಸಿಮೆನ್ ಅಸೋಸಿಯೇಷನ್ ನೀಡಿದ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಸಾರಿಗೆ ಆಯುಕ್ತರೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಬಳಿಕ‌ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ನಿಯೋಗ ಸಾರಿಗೆ ಆಯುಕ್ತರನ್ನು ಭೇಟಿಯಾಗಿ ಸಮಸ್ಯೆಗಳ ಪರಿಹಾರ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ ಅಧ್ಯಕ್ಷರಾದ ಕೆ ಆನಂದ್, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕೋಟ್ಯಾನ್, ಕೋಶಾಧಿಕಾರಿ ಪ್ರಕಾಶ್ ಅಡಿಗ , ಜೊತೆ ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ಬಿ ವಿಕ್ರಂ ರಾವ್, ಬೆಂಗಳೂರು ಟ್ಯಾಕ್ಸಿಮೆನ್ ಅಧ್ಯಕ್ಷರಾದ ಶಿವಣ್ಣ ಹಾಗೂ ರಾಜಕುಮಾರ್ ಮತ್ತು ರಾಧಾಕೃಷ್ಣ ಹೊಳ್ಳ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...
error: Content is protected !!