Sunday, January 19, 2025
Sunday, January 19, 2025

ವಡ್ಡರ್ಸೆ: ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತೋತ್ಸವ

ವಡ್ಡರ್ಸೆ: ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತೋತ್ಸವ

Date:

ಕೋಟ, ಸೆ.23: ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ವಡ್ಡರ್ಸೆ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತೋತ್ಸವ ಕಾರ್ಯಕ್ರಮ ಭಾನುವಾರ ಮಧುವನದ ಶ್ರೀದೇವಿ ಕಾಂಪ್ಲೆಕ್ಸ್ ಎದುರು ಜರಗಿತು. ನಿಪ್ಪಾಣಿಯ ಶ್ರೀ ಶ್ರೀ ಅರುಣಾನಂದ ಸ್ವಾಮೀಜೀ ಆಶೀರ್ವಚನ ನೀಡಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ಬ್ರಹ್ಮಶ್ರೀಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ ಗ್ರಾಮ ಪಂಚಾಯತ್ ಸದಸ್ಯ ಕೆ.ಪಿ ಕೋಟಿ ಪೂಜಾರಿ ಹಾಗೂ ಪತ್ನಿ ಕೆ.ಎಸ್ ಪರಿಮಳ ಇವರುಗಳನ್ನು ಗೌರವಿಸಲಾಯಿತು. ವಡ್ಡರ್ಸೆ ಬಿಲ್ಲವ ಸಂಘದ ಅಧ್ಯಕ್ಷ ಸುಕೇಶ್ ಪೂಜಾರಿ, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಕಾಂಚನ್, ವಡ್ಡರ್ಸೆ ಬಿಲ್ಲವ ಸಂಘದ ಮಾಜಿ ಅಧ್ಯಕ್ಷೆ ಶಾರದಾ ರಾಮ ಪೂಜಾರಿ, ವಡ್ಡರ್ಸೆ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ, ರೇಖಾ ಶರತ್ ಶೆಟ್ಟಿ ಉಪಸ್ಥಿತರಿದ್ದರು.

ಬಿಲ್ಲವ ಮುಖಂಡರಾದ ಭಾಸ್ಕರ್ ಪೂಜಾರಿ ಕುದುರಿಕಟ್ಟೆ ಸ್ವಾಗತಿಸಿ, ಸಂಘದ ಜತೆ ಕೋಶಾಧಿಕಾರಿ ಪ್ರದೀಪ್ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ಸಂಘದ ಸದಸ್ಯೆ ಸರೋಜ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಾಮೂಹಿಕ ಸತ್ಯನಾರಾಯಣ ಪೂಜೆ, ವೇಣುಗೋಪಾಲ ಭಜನಾ ತಂಡ ಉಪ್ಲಾಡಿ ಶ್ರೀ ಮಹಾಲಿಂಗೇಶ್ವರ ವಡ್ಡರ್ಸೆ ಇವರುಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!