Saturday, November 23, 2024
Saturday, November 23, 2024

ಮುಂದಿನ ಭವಿಷ್ಯಕ್ಕಾಗಿ ಪರಿಸರ ಉಳಿಸಿ ಬೆಳೆಸಿ: ಪತ್ರಕರ್ತ ರವೀಂದ್ರ ಕೋಟ

ಮುಂದಿನ ಭವಿಷ್ಯಕ್ಕಾಗಿ ಪರಿಸರ ಉಳಿಸಿ ಬೆಳೆಸಿ: ಪತ್ರಕರ್ತ ರವೀಂದ್ರ ಕೋಟ

Date:

ಕೋಟ, ಸೆ.27: ಪರಿಸರದ ಬಗ್ಗೆ ಪ್ರತಿಯೊಬ್ಬರು ಜಾಗೃತಿ ವಹಿಸುವ ಅವಶ್ಯಕತೆಯಿದೆ ತನ್ಮೂಲಕ ಮುಂದಿನ ಪೀಳಿಗೆಗಾಗಿ ನಾವೆಲ್ಲರು ಗಿಡ ನೆಟ್ಟು ಪರಿಸರ ಸ್ವಚ್ಛವಾಗಿರಿಸಲು ಪಣತೊಡೋಣ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಕೋಟದ ವಿವೇಕ ವಿದ್ಯಾ ಸಂಸ್ಥೆಯ ಸ್ವರ್ಣಭವನದಲ್ಲಿ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ವಾರದ ವಿಶೇಷ ಸಭೆಯಲ್ಲಿ ವಿಶೇಷ ಅತಿಥಿಯಾಗಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಅತಿಯಾಗಿ ಬಳಕೆ ಮಾಡುತ್ತಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳಿಂದ ಮನುಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ, ಹಚ್ಚ ಹಸುರಿನ ಪ್ರಕೃತಿಯನ್ನು ಪ್ರವಾಸೋದ್ಯಮದ ನೆಪದಲ್ಲಿ ಹಾಳುಗೆಡವುತ್ತಿದ್ದೇವೆ. ಇದರಿಂದ ಪ್ರಸ್ತುತ ತಾಪಮಾನ, ಪ್ರಾಕೃತಿಕ ವಿಕೋಪಗಳನ್ನು ಎದುರಿಸುವಂತೆ ಆಗಿದೆ. ಇದೇ ರೀತಿ ಮುಂದುವರೆದರೆ ನಮ್ಮ ಅವನತಿ ಕಟ್ಟಿಟ್ಟ ಬುತ್ತಿ. ಪರಿಸರಕ್ಕಾಗಿ ಇಂದಿನಿಂದಲೇ ಜಾಗೃತರಾಗೋಣ ಆ ಮೂಲಕ ಮಾಲಿನ್ಯ ರಹಿತ ಪರಿಸರ ನಮ್ಮದಾಗಿಸಿಕೊಳ್ಳೋಣ ಎಂದು ಕರೆ ನೀಡಿದರು. ರೋಟರಿ ಕ್ಲಬ್ ವತಿಯಿಂದ ಪತ್ರಕರ್ತ ರವೀಂದ್ರ ಕೋಟ ಇವರನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಅನಿಲ್ ಸುವರ್ಣ ವಹಿಸಿದ್ದರು.

ರೋಟರಿ ಕ್ಲಬ್ ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ರೋಟರಿ ಮಾಜಿ ಜಿಲ್ಲಾ ಸಹಾಯಕ ಗರ್ವನರ್ ಸತೀಶ್ ಶೆಟ್ಟಿ, ಮುಂದಿನ ಸಹಾಯಕ ಗವರ್ನರ್ ಶ್ಯಾಮಸುಂದರ್ ನಾಯರಿ, ಆನ್ಸ್ ಕ್ಲಬ್ ಅಧ್ಯಕ್ಷೆ ರೇವತಿ ಎಸ್ ನಾಯರಿ, ರೋಟರಿ ಕ್ಲಬ್ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ವೆಂಕಟೇಶ ಆಚಾರ್, ಉದಯ್ ಕುಮಾರ್ ಶೆಟ್ಟಿ, ಸದಸ್ಯರಾದ ಶರತ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಗಣೇಶ್ ಯು., ವಲಯ ಸೇನಾನಿ ನಿತ್ಯಾನಂದ್ ನಾಯರಿ, ಗೌರವ ಸದಸ್ಯರಾದ ಲಂಬೋಧರ ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ದಯಾನಂದ್ ಆಚಾರ್ ಸ್ವಾಗತಿಸಿ, ನಿರೂಪಿಸಿದರು. ಮಾಜಿ ಅಧ್ಯಕ್ಷ ಸುರೇಶ್ ಆಚಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!