Sunday, September 29, 2024
Sunday, September 29, 2024

ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಪನ್ನ

ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಪನ್ನ

Date:

ಉಡುಪಿ, ಸೆ.28: ಕೋಟದ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೌಶಲ್ಯತೆಯ ಬಗ್ಗೆ ಕುಂದಾಪುರದ ಸ್ಪರ್ಧಾ ಸಾರಥಿ ತರಬೇತಿ ಸಂಸ್ಥೆಯಿಂದ 30 ಗಂಟೆಗಳ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು. ಸಮಾರೋಪ ಸಮಾರಂಭದಲ್ಲಿ ಕುಂದಾಪುರದ ಸ್ಪರ್ಧಾ ಸಾರಥಿಯ ನಿರ್ದೇಶಕರಾದ ಆದರ್ಶ ಕೆಲ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಪ್ರೊ.ಸುನೀತಾ ವಿ ಅವರು ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗಳಿಗೆ ಸ್ಪರ್ಧಿಸುವಂತೆ ಸ್ಪೂರ್ತಿ ತುಂಬುವ ಪ್ರಯತ್ನ ನಡೆಸಿದ್ದೇವೆ ಎಂದರು. ಐಕ್ಯೂಎಸಿ ಸಂಚಾಲಕರಾದ ಡಾ.ಸುಬ್ರಹ್ಮಣ್ಯ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ ಆಚಾರ್ಯ ಉಪಸ್ಥಿತರಿದ್ದರು. ರಾಹುಲ್‌ ಸ್ವಾಗತಿಸಿ, ಶಾವ್ಯ ವಂದಿಸಿದರು. ವಿದ್ಯಾರ್ಥಿಗಳಾದ ಪೂಜಾ ಮತ್ತು ಸಂಜನಾ ಕಾಮತ್‌ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!