ಯು.ಬಿ.ಎನ್.ಡಿ., ಅ.2: ಇಸ್ರೇಲ್‌ನ ಮೇಲೆ ಇರಾನ್‌ನ ನಡೆಸಿದ ಕ್ಷಿಪಣಿ ದಾಳಿಯ ಹಿನ್ನೆಲೆಯಲ್ಲಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಸ್ತುತ ಟೆಲ್ ಅವಿವ್‌ನಲ್ಲಿರುವ ರಕ್ಷಣಾ ಸಚಿವಾಲಯದ ಪ್ರಧಾನ ಕಛೇರಿಯಲ್ಲಿ ಭದ್ರತಾ ಮುಖ್ಯಸ್ಥರನ್ನು ಭೇಟಿಯಾಗಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇರಾನ್‌ನ ಕ್ಷಿಪಣಿ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಇಸ್ರೇಲ್ ಪ್ರಧಾನಿ ಹೇಳಿದ ಬಳಿಕ ಈ ಉನ್ನತ ಮಟ್ಟದ ಸಭೆದಿರುವುದು ಪ್ರತಿದಾಳಿಯ ಮುನ್ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಇಸ್ರೇಲ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಿದ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ, ಇಸ್ರೇಲ್ ಪ್ರತಿರೋಧ ನಡೆಸಿದರೆ ದಾಳಿಯನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.