Sunday, November 24, 2024
Sunday, November 24, 2024

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಕರಾವಳಿ ಭದ್ರತಾ ತರಬೇತಿ ಸಂಪನ್ನ

Date:

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 8 ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭ ಮಲ್ಪೆಯ ಸಿ.ಎಸ್.ಪಿ ಕೇಂದ್ರ ಕಛೇರಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಪ್ರತಿಯೊಂದು ಇಲಾಖೆಯಲ್ಲಿ ಸಿಬ್ಬಂದಿಗಳು ಕಾಲಕಾಲಕ್ಕೆ ಇಲಾಖೆಯ ಆಧುನಿಕ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಹೊಂದಿಲು ತರಬೇತಿ ಮತ್ತು ಕೌಶಲ್ಯ ಅಗತ್ಯವಿದೆ. ದೇಶದ ರಕ್ಷಣೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಪಾತ್ರ ಮಹತ್ವದಾಗಿದ್ದು, ಈ ನಿಟ್ಟಿನಲ್ಲಿ ಪಡೆದ ತರಬೇತಿಯ ಅಂಶಗಳನ್ನು ಸಾರ್ವಜನಿಕರ ಮತ್ತು ದೇಶದ ರಕ್ಷಣೆಗೆ ಉಪಯೋಗಿಸಬೇಕು ಎಂದರು. ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್. ಎನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಟಿ.ಎಸ್ ಸುಲ್ಫಿ, ಸಿ.ಎಸ್.ಪಿ ಕೇಂದ್ರದ ಸಹಾಯಕ ಆಡಳಿತಾಧಿಕಾರಿ ಮಂಜುಳಾ ಗೌಡ, ಪಿ.ಎಸ್.ಐ ಡಿಎನ್ ಕುಮಾರ್, .ಆರ್‌ಜಿ ಬಿರಾದಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್ ಸ್ವಾಗತಿಸಿ, ಸುಮಾ ನಿರೂಪಿಸಿ, ಗಣಕಯಂತ್ರ ವಿಭಾಗದ ಪಿಎಸ್‌ಐ ಮುಕ್ತಾ ಬಾಯಿ ವಂದಿಸಿದರು.

ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿ ಠಾಣೆಯ ಸಿಎಸ್‌ಪಿ ಯುವರಾಜ್, ದ್ವೀತಿಯ ಸ್ಥಾನ ಪಡೆದ ಹೊನ್ನಾವರ ಠಾಣೆಯ ಸಿಎಸ್‌ಪಿ ವಿನಾಯಕ ನಾಯ್ಕ್ ಹಾಗೂ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸುಮನ ಎಮ್ ಗೌಡ ಇವರನ್ನು ಗೌರವಿಸಲಾಯಿತು ಹಾಗೂ ತರಬೇತಿಯಲ್ಲಿ ಭಾಗವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಯೋಗ, ಈಜು, ಬೋಟ್ ಪೆಟ್ರೋಲಿಂಗ್, ಬೋರ್ಡಿಂಗ್ ಆಪರೇಷನ್, ನೇವಲ್ ಬೇಸ್ ಭೇಟಿ, ಕೋಸ್ಟ್ಗಾರ್ಡ್ ಭೇಟಿ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!