ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ನಾಲ್ಕನೆ ದಿನದ ನವರಾತ್ರಿ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಕೋಟ ಗ್ರಾ.ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ ಕುಟುಂಬಿಕರು ಚಂಡಿಕಾ ಸಪ್ತಶತಿ ಪಾರಾಯಣ, ದುರ್ಗಾಹೋಮದಲ್ಲಿ ಸೇವಾಕರ್ತರಾಗಿ ಭಾಗಿಯಾದರು. ದೇಗುಲದ ಧಾರ್ಮಿಕ ವಿಧಿವಿಧಾನಗಳು ವೇ.ಮೂ ಮಧುಸೂಧನ ಬಾಯರಿ ನೇತೃತ್ವದಲ್ಲಿ ಜರಗಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಲಕ್ಷ್ಮಿನರಸಿಂಹ ಪೂಜಾರಿ ಹಾಡಿಕೆರೆ ಕುಟುಂಬಿಕರಿಗೆ ಪ್ರಸಾದ ವಿತರಿಸಿ ಗೌರವಿಸಿದರು. ದೇಗುಲದಲ್ಲಿ ದೇವಿಯ ನಾಲ್ಕನೆ ದಿನದ ಕೂಷ್ಮಾಂಡ ಅವತಾರದಲ್ಲಿ ಅಮೃತೇಶ್ವರಿ ಪುಷ್ಭಾಂಲಕಾರ ಭಕ್ತರ ಗಮನ ಸೆಳೆಯಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ಮಾಜಿ ಟ್ರಸ್ಟಿ ಸದಸ್ಯರು, ವ್ಯವಸ್ಥಾಪಕರು, ಸಿಬ್ಬಂದಿ ವರ್ಗ, ದೇಗುಲ ಅರ್ಚಕ ವೃಂದದವರು ಉಪಸ್ಥಿತರಿದ್ದರು. ಅಪರಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಜನರು ಭಾಗಿಯಾದರು. ಸಂಜೆ ವಿವಿಧ ಭಜನಾ ತಂಡಗಳಿಂದ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ
ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ
Date: