Tuesday, October 8, 2024
Tuesday, October 8, 2024

ಗಂಗೊಳ್ಳಿ: ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಗಂಗೊಳ್ಳಿ: ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Date:

ಕುಂದಾಪುರ, ಅ.8: ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ ವಿದ್ಯಾರ್ಥಿ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಹಳೆ ವಿದ್ಯಾರ್ಥಿಗಳ ಪುರುಷ ಮತ್ತು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ ಭಾಸ್ಕರ್ ಎಚ್.ಜಿ ಉದ್ಘಾಟಿಸಿದರು. ಎಸ್.ವಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಮ್. ಸಿ , ಸ. ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಎಸ್.ವಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ, ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಉಪಸ್ಥಿತರಿದ್ದರು.
ಬಹುಮಾನ ವಿತರಣೆಯನ್ನು ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಗಂಗೊಳ್ಳಿಯ ಖಜಾಂಚಿ ಅಶ್ವಿನ್ ಮತ್ತು ಸದಸ್ಯ ರಾಮನಾಥ್ ನಾಯಕ್, ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಎಸ್.ವಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸುಗುಣ ನೆರವೇರಿಸಿಕೊಟ್ಟರು. ಬಾಲಕರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಎಸ್.ವಿ ಗಂಗೊಳ್ಳಿ ಮತ್ತು ದ್ವಿತೀಯ ಬಹುಮಾನವನ್ನು ಸಹರಾ ಗಂಗೊಳ್ಳಿ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಸುಶ್ಮಿತಾ ಮತ್ತು ತಂಡ ಮತ್ತು ದ್ವಿತೀಯ ಬಹುಮಾನವನ್ನು ರಕ್ಷಿತಾ ಮತ್ತು ತಂಡ ಪಡೆದುಕೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...

ಸಿಒಡಿಪಿ: ಮಕ್ಕಳ ಶಿಬಿರ

ಮಂಗಳೂರು, ಅ.8: ಮಂಗಳೂರು ಧರ್ಮಪ್ರಾಂತ್ಯದ ಸಿಒಡಿಪಿ ಸೇವಾ ಸಂಸ್ಥೆಯಲ್ಲಿ ಮಕ್ಕಳ ಶಿಬಿರ...

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...
error: Content is protected !!