ತಿರುಚಿರಾಪಳ್ಳಿ, ಅ.11: ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಶುಕ್ರವಾರ ರಾತ್ರಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಹೈಡ್ರಾಲಿಕ್ ವೈಫಲ್ಯದಿಂದಾಗಿ ಮತ್ತೆ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಯಿತು. ಪೈಲಟ್ಗಳು ಇಂಧನವನ್ನು ಕಡಿಮೆ ಮಾಡಲು ಬಯಸಿದ್ದರಿಂದ 2 ಗಂಟೆಗಳ ಕಾಲ ವಿಮಾನವು ಸುಮಾರು 4000 ಅಡಿ ಎತ್ತರದಲ್ಲಿ ಹಾರಾಟ ನಡೆಸಿ, ಸುರಕ್ಷಿತವಾಗಿ ಇಳಿಯಿತು. ತನ್ಮೂಲಕ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳನ್ನು ಸಿದ್ಧಪಡಿಸಲಾಗಿತ್ತು.
ಏರ್ ಇಂಡಿಯಾ ಎಕ್ಸ್ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್
ಏರ್ ಇಂಡಿಯಾ ಎಕ್ಸ್ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್
Date: